ಫೆ.27 : ಪಾಲೆಪ್ಪಾಡಿಯಲ್ಲಿ ಪಂಜುರ್ಲಿ ಹಾಗೂ ಗುಳಿಗ ದೈವದ ನೇಮೋತ್ಸವ

0

ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಶ್ರೀ ಪಂಜುರ್ಲಿ ದೈವಸ್ಥಾನದಲ್ಲಿ ಪಂಜುರ್ಲಿ ಹಾಗೂ ಗುಳಿಗ ದೈವದ ನೇಮೋತ್ಸವವು ಫೆ.27 ರಂದು ನಡೆಯಲಿದೆ.
ಫೆ. 19 ರಂದು ಗೊನೆ ಕಡಿಯಲಾಯಿತು.
ಫೆ.27 ರಂದು ಬೆಳಿಗ್ಗೆ ಗಂಟೆ 7.00 ಕ್ಕೆ ಶ್ರೀ ದೈವಗಳ ಭಂಡಾರ ತೆಗೆಯುವುದು.
ರಾತ್ರಿ ಗಂಟೆ 8.00 ಕ್ಕೆ ಅನ್ನಸಂತರ್ಪಣೆ ,ರಾತ್ರಿ ಗಂಟೆ 9.00 ರಿಂದ ಶ್ರೀ ಪಂಜುರ್ಲಿ ಹಾಗೂ ಗುಳಿಗ ದೈವಗಳ ನೇಮೋತ್ಸವ ಪ್ರಸಾದ ವಿತರಣೆ ನಡೆಯಲಿದೆ.
ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀಮುಡಿ ಗಂಧ ಪ್ರಸಾದ ಸ್ವೀಕರಿಸಿ,ಶ್ರೀ ದೈವಗಳ ಕೃಪೆಗೆ ಪಾತ್ರರಾಗಬೇಕಾಗಿ ಶ್ರೀ ಪಂಜುರ್ಲಿ ದೈವಸ್ಥಾನದ ಆಡಳಿತ ಸಮಿತಿಯವರು ಹಾಗೂ ನೇಮೋತ್ಸವ ಸಮಿತಿಯವರು ತಿಳಿಸಿದ್ದಾರೆ.