ಮುರುಳ್ಯ ಶಾಲೆಯಲ್ಲಿ ರಾಷ್ಟೀಯ ವಿಜ್ಞಾನ ದಿನಾಚರಣೆ

0

ಮುರುಳ್ಯ ಸರಕಾರಿ ಉ. ಹಿ. ಪ್ರಾ.ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಫೆ.28 ರಂದು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಅವಿನಾಶ್ ಡಿ.ರವರು ದೀಪ ಬೆಳಗಿಸಿ, ಸಿ ವಿ ರಾಮನ್ ರವರ ಭಾವಚಿತ್ರಕ್ಕೆ ಪುಷ್ಪ ನಮನಗೈದು , ಒಂದು ವಿಜ್ಞಾನ ಪ್ರಯೋಗದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಗುರುಗಳಾದ ಶಶಿಕಲಾರವರ ಪ್ರಾಸ್ತಾವಿಕ ಮಾತನಾಡಿ ವಿಜ್ಞಾನ ಪ್ರತಿಜ್ಞೆ ಬೋಧಿಸಿದರು.


ವಿಜ್ಞಾನ ಶಿಕ್ಷಕಿ ಸುಮಿತ್ರ ರವರು ದಿನದ ಮಹತ್ವ ಕುರಿತು ಮಾಹಿತಿ ನೀಡಿದರು.
ಎಸ್.ಡಿ.ಎಂ.ಸಿ. ನಿಕಟಪೂರ್ವ ಅಧ್ಯಕ್ಷೆ ಶ್ರೀಮತಿ ಮಧು ಪಿ.ಆರ್. ಮತ್ತು ಉಪಾಧ್ಯಕ್ಷೆ ಶ್ರೀಮತಿ ಹರ್ಷಿತಾ ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾದ ಎಣ್ಮೂರು ಕ್ಲಸ್ಟರ್ ಸಿ.ಆರ್.ಪಿ. ಜಯಂತ್ ವಿಜ್ಞಾನ ದಿನದ ಮಹತ್ವ ಹಾಗೂ ಶಾಲೆಯ ಅಭಿವೃದ್ಧಿ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದರು.
ಶಾಲಾ ವಿದ್ಯಾರ್ಥಿಗಳಾದ ವಿಪ್ರ ಮತ್ತು ನಂದನ್ ಸ್ವಾಗತಿಸಿ, ವಿದ್ಯಾರ್ಥಿನಿ ಶಾರ್ವಿ ವಂದಿಸಿದರು. ವಿದ್ಯಾರ್ಥಿ ನಿತಿನ್ ಕೆ. ಕಾರ್ಯಕ್ರಮ ನಿರೂಪಿಸಿದರು. ಬಳಿಕ ಮಕ್ಕಳಿಂದ ವಿಜ್ಞಾನ ಸ್ಕಿಟ್, ಹಾಡು ಮತ್ತು ಹಲವಾರು ವಿಜ್ಞಾನ ಪ್ರಯೋಗಗಳ ಪ್ರದರ್ಶನ ನಡೆಯಿತು.