ಗೂನಡ್ಕ ಶ್ರೀ ಶಾರದಾ ಅನುದಾನಿತ ಸ.ಹಿ.ಪ್ರಾ. ಶಾಲೆಯಲ್ಲಿ ಸ್ಪೋಕನ್ ಇಂಗ್ಲೀಷ್ ತರಬೇತಿ

0

ದ.ಕ. ಸಂಪಾಜೆ ಗ್ರಾಮದ ಗೂನಡ್ಕ ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಪೋಕನ್ ಇಂಗ್ಲಿಷ್ ಕ್ಲಾಸ್ ತರಬೇತಿ ಕಾರ್ಯಕ್ರಮವು ಫೆ.29ರಂದು ನಡೆಯಿತು.

ಶಾಲಾ ಆಡಳಿತ ಮಂಡಳಿ, ಎಸ್ ಡಿ. ಎಂ. ಸಿ. ಹಾಗೂ ಪೋಷಕರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜಿ. ರಾಮಚಂದ್ರ ಕಲ್ಲಗದ್ದೆ ಅವರು ಅಧ್ಯಕ್ಷತೆ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ಶಾಲಾ ಎಸ್‌. ಡಿ. ಎಂ. ಸಿ. ಉಪಾಧ್ಯಕ್ಷೆ ಶ್ರೀಮತಿ ಆಶಾ ವಿನಯ್, ಶಾಲಾ ಮುಖ್ಯೋಪಾಧ್ಯಾಯ ಹನುಮಂತಪ್ಪ ಜಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇಂಗ್ಲಿಷ್ ಭಾಷೆಯಲ್ಲಿ ಮಕ್ಕಳು ಮಾತನಾಡುವಂತೆ ತಯಾರು ಗೊಳಿಸಿದ ಶಾಲಾ ಶಿಕ್ಷಕಿಯರುಗಳಾದ ಶ್ರೀಮತಿ ಧನ್ಯಶ್ರೀ ಯು ಜೆ. ಶ್ರೀಮತಿ ಭವಿತ ಕೆ. ಪಿ. ಶ್ರೀಮತಿ ಉಷಲತಾ, ಅವರುಗಳ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು.

ಶಾಲೆಯ 5ನೇ ತರಗತಿಯ ವಿದ್ಯಾರ್ಥಿನಿ ಪಾಯಿದ ಸ್ವಾಗತಿಸಿ, ಶಾಲಾ ನಾಯಕ ಮಹಮ್ಮದ್ ಶಾನ್ ಫಾತಿಮತ್ ಸನ ಕಾರ್ಯಕ್ರಮ ನಿರೂಪಿಸಿದರು. ಶಾಲಾ ವಿದ್ಯಾರ್ಥಿನಿ ಪಿಯಾಲಿ ಪಿ ವಂದಿಸಿದರು.
ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಇಂಗ್ಲಿಷ್ ಭಾಷೆಯಲ್ಲಿ ಚಟುವಟಿಕೆಗಳನ್ನು ನಡೆಸಲಾಯಿತು.