ಕೆವಿಜಿ ಪಾಲಿಟೆಕ್ನಿಕ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಸೋಸಿಯೇಷನ್ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ

0

ಸುಳ್ಯದ ಕುರಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಸಂಘ ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಸೋಸಿಯೇಷನ್ ನ 2023- 24 ನೇ ಸಾಲಿನ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.

ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ ಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಯತೀಶ್ ಕೆ. ಎನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಮಾರಂಭದ ವೇದಿಕೆಯಲ್ಲಿ ಕಾಲೇಜಿನ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಚಾಲಕ ವಿವೇಕ್ ಪಿ, ವಿದ್ಯಾರ್ಥಿ ಆಪ್ತ ಸಮಾಲೋಚಕ ರಂಗಸ್ವಾಮಿ ಹಾಗೂ ಮೆಕ್ಯಾನಿಕಲ್ ಅಸೋಸಿಯೇಷನ್ ಸಲಹೆಗಾರ ಮೇಘರಾಜ್ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಚೈತ್ರೇಶ್ ಶೆಟ್ಟಿ ಸ್ವಾಗತಿಸಿ ಕಾರ್ಯದರ್ಶಿ ತಿಲಕ್ ಯು.ಆರ್ ವಂದಿಸಿದರು. ಅನ್ವಿತ್ ಕಾರ್ಯಕ್ರಮ ನಿರೂಪಿಸಿದರು.