ಬೆಳ್ಳಾರೆಯಲ್ಲಿ ಸ್ಮಾರ್ಟ್ ಅಂಗನವಾಡಿ ಕೇಂದ್ರದ ಲೋಕಾರ್ಪಣೆ

0

ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಬೆಳ್ಳಾರೆ ವಲಯ ಮತ್ತು ಗ್ರಾಮ ಪಂಚಾಯತ್ ಬೆಳ್ಳಾರೆ ಇದರ ಆಶ್ರಯದಲ್ಲಿ ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿ. ಬೆಂಗಳೂರು ಮತ್ತು ಊರ ದಾನಿಗಳ ನೆರವಿನಿಂದ ಸಂಪೂರ್ಣ ಸೋಲರೀಕರಣದಿಂದ ನವೀಕರಣಗೊಂಡ ಬೆಳ್ಳಾರೆ ಸ್ಮಾರ್ಟ್ ಅಂಗನವಾಡಿ ಕೇಂದ್ರದ ಲೋಕಾರ್ಪಣೆ ಕಾರ್ಯಕ್ರಮವು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಮಿತಾ ಎಲ್ ರೈ ಇವರ ಅಧ್ಯಕ್ಷತೆಯಲ್ಲಿಮಾ.14 ರಂದು ಜರುಗಿತು.


ಸ್ಮಾರ್ಟ್ ಅಂಗನವಾಡಿ ಕೇಂದ್ರದ ಲೋಕಾರ್ಪಣೆಯನ್ನು ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಅಧ್ಯಕ್ಷರಾದ ಎಸ್. ಏನ್. ಮನ್ಮಥ ಇವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಬೆಳ್ಳಾರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ವೀಣಾ ಮೂಡಾಯಿತೋಟ. ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ಶೈಲಜಾ ಬಿ, ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿ. ಬೆಂಗಳೂರು ಇದರ ಏರಿಯಾ ಮ್ಯಾನೇಜರ್ ಪ್ರಸಾದ್ ಬಿ. ಇವರುಗಳು ಮುಖ್ಯ ಅತಿಥಿಗಳಾಗಿ ಶುಭಹಾರೈಸಿದರು .

ಈ ಕಾರ್ಯಕ್ರಮದಲ್ಲಿ ಪ್ರವೀಣ್ ಕುಮಾರ್ ಪಿ ವಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗ್ರಾಮ ಪಂಚಾಯತ್ ಬೆಳ್ಳಾರೆ , ರೊ.ಶಶಿಧರ್ ಬಿ. ಕೆ ಅಧ್ಯಕ್ಷರು ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಜೆ ಸಿ ಜಗದೀಶ್ ರೈ ಪೆರುವಾಜೆ ಅಧ್ಯಕ್ಷರು ಜೆ ಸಿ ಐ ಬೆಳ್ಳಾರೆ, ಶ್ರೀಮತಿ ಉಷಾ ಪ್ರಸಾದ್ ರೈ ಮೇಲ್ವಿಚಾರಕರು, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಬೆಳ್ಳಾರೆ ವಲಯ, ಶ್ರೀಮತಿ ಸುಜಾತಾ ಜನಾರ್ಧನ ಚೀಮುಳ್ಳು ಅಧ್ಯಕ್ಷರು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ, ಶ್ರೀಮತಿ ದಿವ್ಯಾ ರಮೇಶ್ ಪಡ್ಪು ಅಧ್ಯಕ್ಷರು ಬಾಲವಿಕಾಸ ಸಮಿತಿ ಅಂಗನವಾಡಿ ಕೇಂದ್ರ ಬೆಳ್ಳಾರೆ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭಹಾರೈಸಿದರು .

ಸ್ಮಾರ್ಟ್ ಅಂಗನವಾಡಿಗೆ ಮುಖ್ಯ ಪ್ರಾಯೋಜಕರಾದ ಸೆಲ್ಕೋ ಸೋಲಾರ್ ಸಂಸ್ಥೆಯ ಏರಿಯಾ ಮೆನೇಜರ್ ಪ್ರಸಾದ್ ಬಿ ಇವರನ್ನು ಸನ್ಮಾನಿಸಲಾಯಿತು. ಅಲ್ಲದೆ ಈ ಯೋಜನೆಯನ್ನು ಅನುಷ್ಠಾನ ಮಾಡುವಲ್ಲಿ ವಿಶೇಷ ಮುತುವರ್ಜಿ ವಹಿಸಿ ಶ್ರಮವಹಿಸಿದ ಅಂಗನವಾಡಿ ಕಾರ್ಯಕರ್ತೆ ಭಾರತಿ.ಕೆ ಮತ್ತು ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ದಿವ್ಯ ರಮೇಶ್ ಇವರುಗಳನ್ನು ಗೌರವಿಸಲಾಯಿತು. ಪ್ರಾಯೋಜಕರಾಗಿ ಸಹಕರಿಸಿದ ದಾನಿಗಳನ್ನು ಕೃತಜ್ಞತಾ ಪತ್ರದೊಂದಿಗೆ ಗುರುತಿಸಲಾಯಿತು.

ಗ್ರಾಮ ಪಂಚಾಯತು ಮಾಜಿ ಅಧ್ಯಕ್ಷರಾದ ಚಂದ್ರಶೇಖರ್ ಪನ್ನೆ ಇವರು ಸ್ವಾಗತಿಸಿ, ಅಂಗನವಾಡಿ ಕಾರ್ಯಕರ್ತೆ ಭಾರತಿ. ಕೆ. ವಂದಿಸಿದರು, ನಿವೃತ್ತ ಮುಖ್ಯ ಶಿಕ್ಷಕರಾದ ಅಚ್ಚುತ ಅಟ್ಲುರು ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಪುಟಾಣಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ನೀಡಲಾಯಿತು . ಬೆಳ್ಳಾರೆ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಬೆಳ್ಳಾರೆ ಅಂಗನವಾಡಿ ಸಹಾಯಕಿ ಸುಜಾತ ಬಸ್ತಿಗುಡ್ಡೆ ಸಹಕರಿಸಿದರು.