ನಾಗಪಟ್ಟಣ ಬಳಿ ಇನೋವಾ ಕಾರು ಅಪಘಾತ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಗಾಯ

0

ಸುಳ್ಯದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಕೇರಳ ಕಡೆಗೆ ಹೋಗಿದ್ದು ಇಂದು ಸಂಜೆ ಮರಳಿ ಬರುತ್ತಿದ್ದ ಸಂದರ್ಭ ಅವರು ಪ್ರಯಾಣಿಸುತ್ತಿದ್ದ ಕಾರು ನಾಗಪಟ್ಟಣ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬರೆಗೆ ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದ ಸುಮಾರು ಐದಕ್ಕೂ ಹೆಚ್ಚು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ .

ಸ್ಥಳೀಯರು ಆಟೋರಿಕ್ಷದಲ್ಲಿ ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿಗಳು ಮೈಸೂರು ಮೂಲದವರಾಗಿದ್ದು ಸುಳ್ಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.