ಕಲ್ಮಡ್ಕ ಗ್ರಾಮ ಪಂಚಾಯತ್ ವತಿಯಿಂದ ಪಡ್ಪಿನಂಗಡಿ , ಕಲ್ಮಡ್ಕ ಶಾಲೆಗಳಿಗೆ ಕ್ರೀಡಾ ಸಾಮಾಗ್ರಿ. ವಿತರಣೆ

0

ಕಲ್ಮಡ್ಕ ಗ್ರಾಮ ಪಂಚಾಯತ್ ವತಿಯಿಂದ ಮಾ.16.ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡ್ಪಿನಂಗಡಿ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಮಡ್ಕ ಇಲ್ಲಿಗೆ ಕ್ರೀಡಾ ಸಾಮಾಗ್ರಿ ವಿತರಣೆ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಕುಮಾರ್ ಕೆ.ಎಸ್ ರವರು ಹಸ್ತಾಂತರಿಸಿದರು ಗ್ರಾಮ ಪಂಚಾಯತ್ ಸದಸ್ಯ ಲೋಕೇಶ್ ಆಕ್ರಿಕಟ್ಟೆ , ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೀರ್ತಿಪ್ರಸಾದ್ ಸಿ.ಎಂ ಉಪಸ್ಥಿತರಿದ್ದರು.