ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

0

ರಾಜ್ಯದ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ‌.ಶಿವಕುಮಾರ್ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಸುಬ್ರಹ್ಮಣ್ಯ ಕ್ಕೆ ಬಂದು ದೇವರಿಗೆ ಪೂಜೆ ಸಲ್ಲಿಸಿ, ಹೊಸೋಳಿಗಮ್ಮನ ದರ್ಶನ ಪಡೆದರು.

ದೇವಸ್ಥಾನಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭ ಕಡಬ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಗೇರು ನಿಗಮದ ಅಧ್ಯಕ್ಷೆ ಮಮತ ಗಟ್ಟಿ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಜಿ.ಕೃಷ್ಣಪ್ಪ, ಅಶೋಕ್ ನೆಕ್ರಾಜೆ, ಪಿ.ಸಿ.ವರ್ಗೀಸ್, ದಿನೇಶ್ ಮಡ್ತಿಲ, ಶ್ರೀಮತಿ ಪ್ರವೀಣ ಮರುವಂಜ, ಮಾಧವ ದೇವರಗದ್ದೆ, ಗೋಪಾಲ ಎಣ್ಣೆಮಜಲು ಮತ್ತಿತರರು ಉಪಸ್ಥಿತರಿದ್ದರು.