ಎ.8: ಅರಂತೋಡು ಸ.ಹಿ.ಪ್ರಾ. ಶಾಲಾ ನಿವೃತ್ತ ಶಿಕ್ಷಕಿ ಶ್ರೀಮತಿ ಶಾರದಾ ಅವರಿಗೆ ಬೀಳ್ಕೊಡುಗೆ ಹಾಗೂ ಸಮುದಾಯದತ್ತ ಶಾಲಾ ಕಾರ್ಯಕ್ರಮ

0

ಅರಂತೋಡು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ಶಾರದಾ ಕೆ. ಅವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸಮುದಾಯದತ್ತ ಶಾಲಾ ಕಾರ್ಯಕ್ರಮವು ಶಾಲೆಯ ದಿ.ಯು.ಡಿ. ಶೇಖರ್ ಸ್ಮರಣಾರ್ಥ ಸಭಾ ವೇದಿಕೆಯಲ್ಲಿ ಎ.8ರಂದು ಜರುಗಲಿದೆ.

ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಸುರೇಶ್ ಯು.ಕೆ. ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಶಾಲಾ ನಿವೃತ್ತ ಶಿಕ್ಷಕಿ ಶ್ರೀಮತಿ ಶಾರದಾ ಅವರನ್ನು ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಪ್ರಾಂಶುಪಾಲ ಕೆ.ಆರ್. ಗಂಗಾಧರ ಅವರು ಸನ್ಮಾನಿಸಿ, ಗೌರವಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಈ., ಕ್ಷೇತ್ರ ಸಮನ್ವಯ ಅಧಿಕಾರಿ ಶ್ರೀಮತಿ ಶೀತಲ್ ಯು.ಕೆ., ನಿವೃತ್ತ ಶಿಕ್ಷಕಿ ಗಿರಿಜಾ ಪಿ., ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪಂಚಕರ್ಮ ವಿಭಾಗದ ಸಹ ಪ್ರಾಧ್ಯಾಪಕ ಡಾ. ಲಕ್ಷ್ಮೀಶ ಕೆ‌.ಎಸ್. ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನಾಯ್ಕ ಸೇರಿದಂತೆ ಶಾಲಾ ಎಸ್.ಡಿ.ಎಂ.ಸಿ. ಪದಾಧಿಕಾರಿಗಳು ಶಿಕ್ಷಕ ವೃಂದದವರು ಉಪಸ್ಥಿತರಿರಲಿದ್ದಾರೆ.