ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ” ಆಭರಣಗಳ ಖರೀದಿಗೆ ಉತ್ತಮ ಪ್ರತಿಕ್ರಿಯೆ

0

ಪುತ್ತೂರಿನ ಮುಖ್ಯರಸ್ತೆಯ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಯೋಜಿಸಿದ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ” ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸಾವಿರಾರು ಮಂದಿ ಚಿನ್ನಾಭರಣಗಳನ್ನು ಖರೀದಿಸಿ ಸಂಭ್ರಮಪಟ್ಟರು.

ಗ್ರಾಹಕರಿಗೆ ಚಿನ್ನ, ಬೆಳ್ಳಿ, ವಜ್ರದ ಆಭರಣಗಳ ಮೇಲೆ ಹಲವು ಬಗೆಯ ರಿಯಾಯಿತಿ ಕೊಡುಗೆಗಳನ್ನು ನೀಡಲಾಗಿತ್ತು.

ಅದೇ ರೀತಿ ಸಂಸ್ಥೆಯು ತಮ್ಮ ನೆಚ್ಚಿನ ಗ್ರಾಹಕರಿಗೆ ಯುಗಾದಿ ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸಲು ಈ ಆಫರ್‌ನ್ನು ಎಪ್ರಿಲ್ ೯ರವರೆಗೆ ಮುಂದುವರೆಸಲಿದ್ದು ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬಹುದು. ತಮ್ಮ ಎಲ್ಲ ಶಾಖೆಗಳ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೂರಾರು ವಿನೂತನ ವಿನ್ಯಾಸದ ಆಭರಣಗಳ ಸಂಗ್ರಹ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.