ತಿಲಕಾ ಆರ್ತಾಜೆಯವರಿಗೆ ಮಲೆನಾಡು ಚಾರಿಟೇಬಲ್ ಟ್ರಸ್ಟ್ ಗೌರವ

0

ಕಳೆದ ಫೆಬ್ರವರಿ ತಿಂಗಳಲ್ಲಿ ತಮಿಳುನಾಡು ಅಣ್ಣ ಸ್ಟೇಡಿಯಂನಲ್ಲಿ ನಡೆದ 43 ನೇ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟ ಚಾಂಪಿಯನ್ ಶಿಪ್ 2024ರಲ್ಲಿ ಭಾಗವಹಿಸಿ ಸ್ವೀಡನ್ ನಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ತಿಲಕಾ ಅರ್ತಾಜೆ ಇವರಿಗೆ ಮಲೆನಾಡು ಚಾರಿಟೇಬಲ್ ಟ್ರಸ್ಟ್ ಹಾಗೂ ಮುಂಗಾರು ಸ್ಪೋರ್ಟ್ಸ್ ಕ್ಲಬ್ ನಿಂದ ಟ್ರಸ್ಟ್ ಅಧ್ಯಕ್ಷ ಸುಳ್ಯ ನಗರ ಪಂಚಾಯತ್ ಸದಸ್ಯ ರಿಯಾಜ್ ಕಟ್ಟೆಕಾರ್ ಗೌರವಿಸಿದರು. ಈ ಸಂದರ್ಭದಲ್ಲಿ ತಿಲಕಾ ಅವರ ಪತಿ ನವೀನ್ ರವರು ಉಪಸ್ಥಿತರಿದ್ದರು