ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿಗೆ ಶೇ.91 ಫಲಿತಾಂಶ

0

ಸೌಜನ್ಯ ಡಿಸ್ಟಿಂಕ್ಷನ್ ಅಂಕದೊಂದಿಗೆ ಕಾಲೇಜಿಗೆ ಪ್ರಥಮ

ಪುತ್ತೂರು ತಾಲೂಕಿನ ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿಗೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.91 ಫಲಿತಾಂಶ ದಾಖಲಾಗಿದೆ.

ಕಾಲೇಜಿನಿಂದ ಪರೀಕ್ಷೆಗೆ ಹಾಜರಾದ ಒಟ್ಟು 11 ಮಂದಿ ವಿದ್ಯಾರ್ಥಿಗಳಲ್ಲಿ 10 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅಮ್ಚಿನಡ್ಕದ ಸುರೇಶ ಹಾಗೂ ಶ್ರೀಮತಿ ಗೀತಾ ದಂಪತಿಯ ಪುತ್ರಿ ಸೌಜನ್ಯ 561 ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ.
ಏಳು ಮಂದಿ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಇಬ್ಬರು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.