ಕೆವಿಜಿ ಪಾಲಿಟೆಕ್ನಿಕ್ : ಅಡ್ವಾನ್ಸ್ ಟೆಕ್ನಾಲಜಿ ಬಗ್ಗೆ ಉಪನ್ಯಾಸ

0

ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಅಟೊಮೊಬೈಲ್ ವಿಭಾಗದ ವಿದ್ಯಾರ್ಥಿ ಸಂಘದ ವತಿಯಿಂದ ಅಡ್ವಾನ್ಸ್ ಟೆಕ್ನಾಲಜಿ ಬಗ್ಗೆ ಉಪನ್ಯಾಸ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು .

ಬೆಂಗಳೂರಿನ ಸ್ಕೋಡಾ ವೋಲ್ಕ್ಸ್ ವ್ಯಾಗನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಟ್ರೈನಿಂಗ್ ಮ್ಯಾನೇಜರ್ ಮನೋಜ್ ಜಿ. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಅಟೊಮೊಬೈಲ್ ಕ್ಷೇತ್ರದ ಹೊಸ ತಂತ್ರಜ್ಞಾನಗಳು, ಇಲೆಕ್ಟ್ರಿಕಲ್ ವಾಹನಗಳ ಕಾರ್ಯವೈಖರಿ ಇತ್ಯಾದಿಗಳ ಜೊತೆಗೆ ವ್ಯಕ್ತಿತ್ವ ವಿಕಸನದ ಬಗ್ಗೆ ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ. ಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ವಿಭಾಗದ ಮುಖ್ಯಸ್ಥ ಚಂದ್ರಶೇಖರ ಎಂ.ಎನ್. ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಚಾಲಕ ವಿವೇಕ್ ಪಿ, ವಿದ್ಯಾರ್ಥಿ ಆಪ್ತ ಸಮಾಲೋಚಕ ರಂಗಸ್ವಾಮಿ ಹಾಗೂ ವಿದ್ಯಾರ್ಥಿ ಸಂಘದ ಸಲಹೆಗಾರ ಚಂದ್ರಶೇಖರ ಬಿಳಿನೆಲೆ ಉಪಸ್ಥಿತರಿದ್ದರು.

ರಕ್ಷಿತ್ ರವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಉಜ್ವಲ್ ಸ್ವಾಗತಿಸಿ, ಅಂಕಿತ್ ವಂದಿಸಿದರು. ಇಂಪನ್ ಕಾರ್ಯಕ್ರಮ ನಿರೂಪಿಸಿದರು.