ಎ.16 (ನಾಳೆ) ಈ ಭಾಗಗಳಲ್ಲಿ ಕರೆಂಟಿಲ್ಲ

0

ಎ.16( ನಾಳೆ)ಮಂಗಳವಾರ ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯಲ್ಲಿ ಸುಳ್ಯ 110ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ಕಾಮಗಾರಿಗಳಿಗೆ ಸಂಬಂಧಿಸಿದಂತೆ 33/11ಕೆ.ವಿ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದ ಆವರಣದಿಂದ 11ಕೆ.ವಿ ಫೀಡರ್ಗಳನ್ನು ಸ್ಥಳಾಂತರಿಸುವ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಲೊ, ತೋಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವಾರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಗ್ಗೆ 10:00 ರಿಂದ ಸಾಯಂಕಾಲ ‘6:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕಾಗಿ ಕೋರಲಾಗಿದೆ.

ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.