ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ : ಮಕ್ಕಳ ಬೇಸಿಗೆ ಶಿಬಿರ

0

ಬೇಸಿಗೆ ಶಿಬಿರಗಳು ಮಕ್ಕಳ ಬೌದ್ಧಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ: ಶ್ರೀಮತಿ ನಮಿತಾ ಎಲ್. ರೈ

ಗ್ರಾಮ ಪಂಚಾಯತು ಬೆಳ್ಳಾರೆ ಹಾಗೂ ಗ್ರಾಮ ಪಂಚಾಯ ತು ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಬೆಳ್ಳಾರೆ ಇದರ ಆಶ್ರಯದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ಮೇ 9 ರಂದು ಬೆಳ್ಳಾರೆ ರಾಜೀವ್ ಗಾಂಧೀ ಸೇವಾ ಕೇಂದ್ರದಲ್ಲಿ ಜರುಗಿತು ಕಾರ್ಯಕ್ರಮವನ್ನು ಗ್ರಾಮ ಪಂಚಾಯತು ಅಧ್ಯಕ್ಷರಾದ ಶ್ರೀಮತಿ ನಮಿತ ಎಲ್ ರೈ ದೀಪ ಬೆಳಗಿಸಿ ಉದ್ಘಾಟಿಸಿ.ಬೇಸಿಗೆ ಶಿಬಿರದಲ್ಲಿ ಹೆಚ್ಚಿನ ಮಕ್ಕಳು ಭಾಗವಹಿಸಿ ಹೊಸ ಹೊಸ ವಿಷಯಗಳ ಸದುಪಯೋಗವನ್ನು ಪಡೆಯಿರಿ ಎಂದು ಶುಭ ಹಾರೈಸಿದರು. ಪಂಚಾಯತ್ ಕಾರ್ಯದರ್ಶಿ ತಿರುಮಲೇಶ್ವರ ಇವರು ಬೇಸಿಗೆ ಶಿಬಿರದ ಬಗ್ಗೆ ಪ್ರಾಸ್ತಾವಿಕ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾದ ಪದ್ಮನಾಭ ಕಲಾಸುಮ ಅರ್ಟ್ಸ್ ಬೆಳ್ಳಾರೆ ಇವರು ಮಕ್ಕಳಿಗೆ ಮನೋರಂಜನೆ ಮತ್ತು ಚಿತ್ರಕಲಾ ಶಿಬಿರ ನಡೆಸಿಕೊಟ್ಟರು, ಕಾರ್ಯಕ್ರಮದಲ್ಲಿ ಬೆಳ್ಳಾರೆ ಪಂಚಾಯತ್ ಲೆಕ್ಕ ಸಹಾಯಕರಾದ ಶ್ರೀಮತಿ ಸುಶೀಲ ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ, ಸಂಜೀವಿ ಒಕ್ಕೂಟದ ಸದಸ್ಯರು, ಪಶುಸಖಿ, ಹಾಗೂ ಡಾ. ಕೆ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆಯ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು ಸಹಕರಿಸಿದರು. ಶ್ರೇಯ ಹಾಗೂ ಕೇತನ ಪ್ರಾರ್ಥಸಿದರು, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕಿ ಶಶಿಕಲಾ ಸ್ವಾಗತಿಸಿ, ಸಮಾಜಕಾರ್ಯ ವಿಭಾಗ ವಿದ್ಯಾರ್ಥಿ ಮೋಹಿನಿ ವಂದಿಸಿದರು