ಎನ್ನೆಂಸಿ ನೇಚರ್ ಕ್ಲಬ್ ವತಿಯಿಂದ ಗ್ರಾಫಿಕ್ ಡಿಸೈನಿಂಗ್ ಮತ್ತು ಕಂಟೆಂಟ್ ಮೇಕಿಂಗ್ ಮಾಹಿತಿ ಕಾರ್ಯಗಾರ

0

ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ವತಿಯಿಂದ ಗ್ರಾಫಿಕ್ ಡಿಸೈನಿಂಗ್ ಮತ್ತು ಕಂಟೆಂಟ್ ಮೇಕಿಂಗ್ ಬಗ್ಗೆ ಮಾಹಿತಿ ಕಾರ್ಯಗಾರ ಹಾಗೂ ಸಂವಾದ ಕಾರ್ಯಕ್ರಮ ಮೇ 09 ರಂದು ಕಾಲೇಜಿನ ದೃಶ್ಯ ಶ್ರವಣ ಸಭಾಂಗಣದಲ್ಲಿ ನಡೆಯಿತು.


ಯೂ ಟ್ಯೂಬರ್ ಹಾಗೂ ಪೋಸ್ಟರ್ ಡಿಸೈನರ್ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿ ಮುರಳಿ ಕೃಷ್ಣ ವೈ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು. ಗ್ರಾಫಿಕ್ ಡಿಸೈನಿಂಗ್ ಮತ್ತು ಕಂಟೆಂಟ್ ಮೇಕಿಂಗ್ ಮಾಡುವುದರ ಬಗ್ಗೆ ಪ್ರಾಯೋಗಿಕವಾಗಿ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಫೋಟೋ ವಿಡಿಯೋ ಎಡಿಟಿಂಗ್ ಮಾಡುವ ಕುರಿತು ತಿಳಿಸಿದರು.


ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ ಎಂ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಅವಧಿಯಲ್ಲಿಯೇ ಸಮಯಾವಕಾಶ ಸಿಕ್ಕಾಗ ಫೋಟೋ ವೀಡಿಯೋ ಎಡಿಟಿಂಗ್ ಮತ್ತು ಭಿತ್ತಿ ಪತ್ರ ತಯಾರಿಕೆಯಲ್ಲಿ ತೊಡಗಿಸಿಕೊಂಡು ಆದಾಯ ಪಡೆಯಬಹುದು ಮತ್ತು ಈ ಕ್ಷೇತ್ರದಲ್ಲಿ ಸಿಗುವ ಉದ್ಯೋಗ ಅವಕಾಶಗಳ ಸದುಪಯೋಗ ಪಡೆದುಕೊಳ್ಳುವಂತೆ ಅಭಿಪ್ರಾಯ ವ್ಯಕ್ತಪಡಿಸಿದರು.


ಕಾಲೇಜಿನ ನೇಚರ್ ಕ್ಲಬ್ ಸಂಯೋಜಕ ಕುಲದೀಪ್ ಪೆಲ್ತಡ್ಕ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ವೇದಿಕೆಯಲ್ಲಿ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥೆ ಅಕ್ಷತಾ ಬಿ, ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಹರ್ಷಕಿರಣ ಬಿ ಉಪಸ್ಥಿತರಿದ್ದರು. ಅಂತಿಮ ಜೀವವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ಕೀರ್ತಿಕಾ ನಿರೂಪಿಸಿದರು.ಕಾಲೇಜಿನ ವಿವಿಧ ವಿಭಾಗಗಳ ಉಪನ್ಯಾಸಕರು, ವಿದ್ಯಾರ್ಥಿ ಸಂಘದ ನಾಯಕ ಜೋಸ್ಬಿನ್ ಬಾಬು, ನೇಚರ್ ಕ್ಲಬ್ ಸದಸ್ಯರು ಮತ್ತು ಬೋಧಕೇತರ ಸಿಬ್ಬಂದಿಗಳು ಸಹಕರಿಸಿದರು.