ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ

0

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸಂಘದ ಸದಸ್ಯರ ಮಕ್ಕಳು ಈ ಬಾರಿಯ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು.

ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥರವರು ಮಾತನಾಡಿ ಸಹಕಾರಿ ಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಶೇ.90 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಗ್ರಾಮದ ಸಂಘದ ಸದಸ್ಯರ ಮಕ್ಕಳಾದ 12 ಮಂದಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಿ ಪ್ರೋತ್ಸಾಹ ಧನ ನೀಡಲಾಗುತ್ತದೆ.

ಉತ್ತಮ ಅಂಕಗಳನ್ನು ಪಡೆದು ಗ್ರಾಮದ ವಿದ್ಯಾರ್ಥಿಗಳು ಐವರ್ನಾಡನ್ನು ರಾಜ್ಯದಲ್ಲೇ ಗುರುತಿಸುವಂತೆ ಮಾಡಿರುವುದು ನಮಗೆ ಹೆಮ್ಮೆ ತಂದಿದೆ.

ಮನೆಯವರಿಗೂ,ಕಲಿತ ಶಾಲೆಗೂ ವಿದ್ಯಾರ್ಥಿಗಳು ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿ ಜೀವನ ಪ್ರಮುಖವಾದ ಘಟ್ಟ.ಮುಂದೆಯೂ ಉತ್ತಮ ವಿದ್ಯಾಭ್ಯಾಸ ಮಾಡುವಂತೆ ದೇವರ ಅನುಗ್ರಹ ಸದಾ ಇರಲಿ ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ದೀಕ್ಷಿತ್ ಎಂ., ನಿರ್ದೇಶಕರಾದ ವಾಸುದೇವ ಬೊಳುಬೈಲ್,ಮಹೇಶ ಜಬಳೆ, ಸರಸ್ವತಿ ಕೆ,ಚಂದ್ರಶೇಖರ ಎಸ್,ಕುಸುಮಾಧರ ಮಡ್ತಿಲ ,ವಿದ್ಯಾರ್ಥಿಗಳ ಪೋಷಕರು,ಮನೆಯವರು ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.