ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಸುಳ್ಯ ಪೊಲೀಸ್ ಠಾಣೆ ಹಾಗೂ ಸರಕಾರಿ ಆಸ್ಪತ್ರೆಗೆ ಭೇಟಿ

0

ಪೊಲೀಸ್ ಠಾಣೆಯಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳ ಬಗ್ಗೆ ಪರಿಶೀಲನೆ, ಸರಕಾರಿ ಆಸ್ಪತ್ರೆಯಲ್ಲಿ ಮಹಿಳೆಯರ ವಾರ್ಡ್ ಹಾಗೂ ಪ್ರಸೂತಿ ಕೇಂದ್ರ ಪರಿಶೀಲನೆ

ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಮೇ.18ರಂದು ಸುಳ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪೊಲೀಸ್ ಠಾಣೆ ಹಾಗೂ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಸುಳ್ಯ ಪೊಲೀಸ್ ಠಾಣೆಗೆ ಭೇಟಿ ನೀಡಿದ ಅವರು ಠಾಣೆಯಲ್ಲಿ ದಾಖಲಾಗಿರುವ ಮಹಿಳಾ ದೌರ್ಜನ್ಯ ಪ್ರಕರಣ, ಪೋಕ್ಸೋ ಪ್ರಕರಣ ಹಾಗೂ ಇನ್ನಿತರ ಘಟನೆಗಳ ಬಗ್ಗೆ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕಿ ಸರಸ್ವತಿ ಅವರಿಂದ ಮಾಹಿತಿ ಪಡೆದುಕೊಂಡರು.

ಮಾದಕ ವ್ಯಸನಗಳ ತಡೆ, ಪೋಕ್ಸೋ ಪ್ರಕರಣದ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿರುವ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ಅದರೊಂದಿಗೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿಗಳೊಂದಿಗೆ ಮಾತನಾಡಿ ಠಾಣಾ ಪರಿಸರದ ವಾತಾವರಣಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಬಳಿಕ ಠಾಣಾ ಪರಿಸರವನ್ನು ವೀಕ್ಷಿಸಿ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಕರ್ತವ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಅವರು ಸುಳ್ಯ ತಾಲೂಕು ವೈದ್ಯಧಿಕಾರಿ ಡಾ.ನಂದಕುಮಾರ್ ಹಾಗೂ ಆಸ್ಪತ್ರೆಯ ವೈದ್ಯಧಿಕಾರಿ ಡಾ.ಕೆ.ವಿ.ಕರುಣಾಕರ ಅವರಲ್ಲಿ ಆಸ್ಪತ್ರೆಯ ಕಾರ್ಯಚಟುವಟಿಕೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಮಹಿಳಾ ರೋಗಿಗಳ ವಾರ್ಡ್ ಹಾಗೂ ಹೆರಿಗೆ ವಾರ್ಡ್‌ಗೆ ಭೇಟಿ ನೀಡಿ ಅಲ್ಲಿಯ ಸ್ಥಿತಿ ಗತಿಯ ಬಗ್ಗೆ ಪರಿಶೀಲನೆ ನಡೆಸಿ ರೋಗಿಗಳಲ್ಲಿ ಆಸ್ಪತ್ರೆಯಿಂದ ದೊರಕುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡು ಮಾತುಕತೆ ನಡೆಸಿದರು.

ಈ ವೇಳೆ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ಯವರು ಆಸ್ಪತ್ರೆಯಲ್ಲಿ ಹೆರಿಗೆ ತಜ್ಞರ ಕೊರತೆ ಇರುವ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷರ ಗಮನಕ್ಕೆ ನೀಡಿದಾಗ ಕಳೆದ ೭ ವರ್ಷದಿಂದ ಆಸ್ಪತ್ರೆಯಲ್ಲಿ ಹೆರಿಗೆ ತಜ್ಞರ ಹುದ್ದೆ ಖಾಲಿ ಇರುವ ಬಗ್ಗೆ ವೈದ್ಯರು ತಿಳಿಸಿದಾಗ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ನೀಡಿ ಆರೋಗ್ಯ ಸಚಿವರಿಗೆ ಮಾಹಿತಿ ನೀಡಿ ಪೂರಕ ಸ್ಪಂದನೆ ನೀಡುವ ಭರವಸೆಯನ್ನು ನೀಡಿದರು. ಬಳಿಕ ಆಸ್ಪತ್ರೆಯ ಕಾರ್ಯಚಟುವಟಿಕೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡೆಸಿದರು.

ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ನಗರ ಪಂಚಾಯತ್ ನಾಮ ನಿರ್ದೇಶಕ ಸದಸ್ಯ ಸಿದ್ಧೀಕ್ ಕ್ಕೊಕ್ಕೋ, ಕಾಂಗ್ರೆಸ್ ಪಕ್ಷದ ಮುಖಂಡ ಪ್ರಹ್ಲಾದ್ ಬೆಳ್ಳಿಪ್ಪಾಡಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.