ಪೆರುವಾಜೆ: ಡಾ. ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಅಂತರ ಕಾಲೇಜು ಕಾಮರ್ಸ್ ಫೆಸ್ಟ್

0

ರಾಷ್ಟ್ರಮಟ್ಟದ ಹದಿನಾರು ಕಾಲೇಜುಗಳ ವಿವಿಧ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಬೆಳ್ಳಾರೆಯ ಪೆರುವಾಜೆ ಡಾ.ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ಆಯೋಜಿಸಿದ ಒಂದು ದಿನದ ರಾಷ್ಟ್ರಮಟ್ಟದ ಅಂತರ ಕಾಲೇಜು ಕಾಮರ್ಸ್ ಫೆಸ್ಟ್ “ಎಕ್ಸಂಲೆನ್ಸಿಯ 2K24” ಮೇ.14ರಂದು ನಡೆಯಿತು.

ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದು, ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ರಾಷ್ಟ್ರಮಟ್ಟದಿಂದ ಹದಿನಾರು ಕಾಲೇಜುಗಳಿಂದ ವಿದ್ಯಾರ್ಥಿಗಳು ಈ ಫೆಸ್ಟ್ ನ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡರು.


ನಿವೃತ ಹೆಚ್ಚುವರಿ ನಿರ್ದೇಶಕ ರಾಜಶೇಖರ್ ಹೆಬ್ಬಾರ್ ಸಿ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಇಂದಿನ ವಿದ್ಯಾರ್ಥಿಗಳು ಧನಾತ್ಮಕವಾಗಿ ಹೇಗೆ ತಮ್ಮ ಜೀವನ ರೂಪಿಸಬೇಕು ಎನ್ನುವ ಕುರಿತು ಮಾತನಾಡಿದರು.


ಮುಖ್ಯ ಅತಿಥಿಯಾಗಿದ್ದ ನಿವೃತ್ತ ಕಸ್ಟಮ್ಸ್ ಅಧಿಕಾರಿ ಆರ್.ಕೆ ಭಟ್ ಕುರುಂಬುಡೇಲು ಅವರು ವ್ಯಕ್ತಿತ್ವ ವಿಕಸನದಲ್ಲಿ ಕಾಮರ್ಸ್ ಫೆಸ್ಟ್ನ ಪಾತ್ರದ ಕುರಿತು ಮಾತನಾಡಿದರು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸುಳ್ಯದ ಕೆ.ವಿ.ಜಿ ಡೆಂಟಲ್ ಕಾಲೇಜಿನ ಡಾ| ಮನೋಜ್ ಕುಮಾರ್ ಎ.ಡಿ. ಹಾಗೂ ವಾಸುದೇವ ಪೆರುವಾಜೆ ಅವರು ಉಪಸ್ಥಿತರಿದ್ದರು.


ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ದಾಮೋದರ ಕಣಜಾಲು ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಕಾಂತರಾಜು ಸಿ, ಸಾಂಸ್ಕೃತಿಕ ಸಮಿತಿಯ ಸಂಯೋಜಕ ಯತೀಶ್ ಕುಮಾರ್ ಎಂ., ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕಿ ಶ್ರೀಮತಿ ಪ್ರತಿಮ, ವಾಣಿಜ್ಯ ಸಂಘದ ವಿದ್ಯಾರ್ಥಿ ಪದಾಧಿಕಾರಿಗಳಾದ ನಿಶ್ಮಿತ್ ರೈ, ಪವಿತ್ರ ಎಸ್, ನಿತಿನ್ ಹಾಗೂ ಫೆಸ್ಟ್ ಸಂಯೋಜಕರಾದ ಹೇಮಂತ್ ಎ ಹಾಗೂ ಪ್ರಜ್ಞಾ ಸಿ.ಎಂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.