ಕೆ.ವಿ.ಜಿ ನರ್ಸಿಂಗ್ ಸಂಸ್ಥೆಯ ಪದವಿ ಪ್ರದಾನ ಸಮಾರಂಭ ಮೇ 17 ರಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಅಧ್ಯಕ್ಷ ಡಾ.ಕೆ.ವಿ ಚಿದಾನಂದರ ಅಧ್ಯಕ್ಷತೆಯಲ್ಲಿ
ನಡೆಯಿತು.
ಮುಖ್ಯ ಅತಿಥಿಯಾಗಿ ಕರ್ನಾಟಕ ಸರಕಾರದ ಡೈರೆಕ್ಟರೇಟ್ ಆಫ್ ಮೆಡಿಕಲ್ ಎಜುಕೇಶನ್ ಎಸ್.ಟಿ ಇದರ ಡೆಪ್ಯೂಟಿ ಡೈರಕ್ಟರ್ ಡಾ. ಶ್ರೀನಿವಾಸ ಮೂರ್ತಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ನ ಪ್ರಧಾನ ಕಾರ್ಯದರ್ಶಿ, ಆರ್ಕಿಟೆಕ್ಟ್ ಅಕ್ಷಯ್ ಕೆ.ಸಿ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಉಪಾಧ್ಯಕ್ಷೆ ಶ್ರೀಮತಿ ಶೋಭಾ ಚಿದಾನಂದ, ಎ.ಓ.ಎಲ್.ಇ ನಿರ್ದೇಶಕಿ, ಬೆಂಗಳೂರು ರಾಜೀವ ಗಾಂಧಿ ವಿಶ್ವವಿದ್ಯಾಲಯದ ಸೆನೆಟ್ ಮೆಂಬರ್ ಡಾ. ಐಶ್ವರ್ಯ ಕೆ.ಸಿ., ಎ.ಓ.ಎಲ್ ಇ ಕೋಶಾಧಿಕಾರಿ ಡಾ. ಗೌತಮ್ ಗೌಡ ಎ.ಜಿ, ಕೆ.ವಿ.ಜಿ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಡೀನ್ ಡಾ. ನೀಲಾಂಬಿಕೈ ನಟರಾಜನ್, ಕೆ.ವಿ.ಜಿ.ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಮೆಡಿಕಲ್ ಸೂಪರಿಟೆಂಡೆಂಟ್ ಡಾ.ಸಿ ಆರ್.ಭಟ್ ಉಪಸ್ಥಿತರಿದ್ದರು.
ಡಾ. ಅಂಜಲಿ ರಾವ್ ಅತಿಥಿಗಳನ್ನು ಪರಿಚಯಿಸಿದರು. ಶ್ರೀಮತಿ ಲವಿನಾ ಕೆ.ಎ ಪದವಿ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಕೆವಿಜಿ ಮೆಡಿಕಲ್ ಕಾಲೇಜಿನ ರಿಜಿಸ್ಟ್ರಾರ್ ಡಾ. ಸಂದೇಶ್ ಕೆ.ಎಸ್, ಎ.ಒ.ಎಲ್.ಇ. ನಿರ್ದೇಶಕ ಜಗದೀಶ್ ಅಡ್ತಲೆ, ಧನಂಜಯ ಮದುವೆಗದ್ದೆ, ದಾಮೋದರ ಗೌಡ, ಚಂದ್ರಶೇಖರ ಪೆರಾಲ್ ಸೇರಿದಂತೆ ಅನೇಕ ಗಣ್ಯರು ಸಭೆಯಲ್ಲಿ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಪ್ರೊ. ಬಿ.ಎಂ ಪ್ರೇಮ ಪದವಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಕೆ.ವಿ.ಜಿ ಸಮೂಹ ಸಂಸ್ಥೆಗಳ ಪ್ರಾಂಶುಪಾಲರುಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪ್ರೊ. ಪ್ರಮೋದ್ ಕೆ.ಜೆ ಸ್ವಾಗತಿಸಿ, ಶ್ರೀಮತಿ ಜಿಮ್ಸಿ ಜಾನ್ ವಂದಿಸಿದರು. ಪ್ರೊ. ಶಿಲ್ಪಾ ಎನ್.ಎಮ್ ಕಾರ್ಯಕ್ರಮವನ್ನು ನಿರೂಪಿಸಿದರು.