ಹಳೆಗೇಟು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಗುಡ್ಡೆ ಹತ್ತಿ ಹೊರಬಂದ ಕಾರು

0

ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಮತ್ತೊಂದು ವಾಹನಕ್ಕೆ ಡಿಕ್ಕಿ, ವಾಹನಗಳು ಜಖಂ

ಸುಳ್ಯ ಹಳೆಗೇಟು ಸಮೀಪ ಆಲ್ಟೊ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಡ್ಡದ ಮೇಲೆ ಹತ್ತಿ ಹೊರಬಂದು ಅಲ್ಲೇ ಪಕ್ಕದಲ್ಲಿ ನಿಲ್ಲಿಸಿದ್ದ ಸ್ಕಾರ್ಪಿಯೋ ವಾಹನಕ್ಕೆ ಡಿಕ್ಕಿಯಾಗಿರುವ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ.

ಸುಳ್ಯ ಭಾಗದಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಕಾರು ಹಳೆಗೇಟು ಪೆಟ್ರೋಲ್ ಬಂಕ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬಲಭಾಗದ ಗುಡ್ಡಕ್ಕೆ ಹತ್ತಿ ಅಲ್ಲಿಂದ ಹೊರ ಬಂದು ಮನೆಯ ಮುಂಭಾಗದ ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕಾರ್ಪಿಯೊ ವಾಹನಕ್ಕೆ ಡಿಕ್ಕಿಯಾಗಿದೆ.

ಘಟನೆಯಿಂದ ಎರಡು ವಾಹನಗಳು ಜಖಮ್ ಗೊಂಡಿದ್ದು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯವಾಗಿರುತ್ತೆದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನು ತಿಳಿಯಬೇಕಾಗಿದೆ.