ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 6ನೇ ಸ್ಥಾನಿಯಾದ ಪ್ರಣಮ್ಯ ಎನ್.ಆಳ್ವಗೆ ಜಿಲ್ಲಾಧಿಕಾರಿಗಳಿಂದ ಗೌರವ ಸನ್ಮಾನ

0

ಸುಳ್ಯ ರೋಟರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಣಮ್ಯ ಎನ್.ಆಳ್ವ 620 ಅಂಕಗಳೊಂದಿಗೆ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ, ಜಿಲ್ಲಾ ಮಟ್ಟದಲ್ಲಿ ೪ನೇ ಸ್ಥಾನ , ರಾಜ್ಯ ಮಟ್ಟದಲ್ಲಿ ೬ನೇ ಸ್ಥಾನ ಪಡೆದಿದ್ದು ಅವರನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮಂಗಳೂರಿನ ಡಿ.ಸಿ. ನಿವಾಸದಲ್ಲಿ ಸನ್ಮಾನಿಸಿದರು.


ಈ ಸಂದರ್ಭದಲ್ಲಿ ಜಿ.ಪಂ ಸಿ.ಇ.ಒ ಡಾ.ಆನಂದ್. ಕೆ,ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸಿ.ಡಿ.ಜಯಣ್ಣ, ಮತ್ತು ವೆಂಕಟೇಶ್ ಸುಬ್ರಾಯ ಪಟಾಗಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.