ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭ

0

ಪ್ರತಿಭಾನ್ವಿತರಿಗೆ ಸನ್ಮಾನ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಮೇ. 28ರಂದು ವಾರ್ಷಿಕೋತ್ಸವ ಸಮಾರಂಭ ನೆರವೇರಿತು.

ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಪುತ್ತೂರು ಇಲ್ಲಿನ ಸಹಾಯಕ ಪ್ರಾಧ್ಯಾಪಕರಾದ, ಡಾ. ನರೇಂದ್ರ ರೈ ದೇರ್ಲ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ವಿದ್ಯಾರ್ಥಿಗಳು ಜೀವನೋತ್ಸಾಹ ಬೆಳೆಸಿಕೊಳ್ಳಬೇಕು . ಪುಸ್ತಕಗಳು ಜ್ಞಾನದ ಸಾಗರ. ವಿದ್ಯಾರ್ಥಿಗಳಲ್ಲಿ ಜ್ಞಾನದ ದಾಹ ಹೆಚ್ಚಬೇಕು ಎಂದು ನುಡಿದರು. ಕುಕ್ಕೆ ಸುಬ್ರಹ್ಮಣ್ಯ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾl ನಿಂಗಯ್ಯ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ದಿನೇಶ ಪಿ.ಟಿ ವಹಿಸಿದರು.







ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸಕೋಶದ ಸಂಯೋಜಕರಾದ ಶ್ರೀಮತಿ ಲತಾ ಬಿ.ಟಿ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಆನಂದ ಎಚ್.ಟಿ, ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ್ ಪ್ರಸಾದ್, ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷರಾದ ಸುಹಾಸ್, ಉಪಾಧ್ಯಕ್ಷರಾದ ಕುಮಾರಿ ಪೂಜಾ, ಕಾರ್ಯದರ್ಶಿಯಾದ ಕೌಶಿಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವಾರ್ಷಿಕ ಪರೀಕ್ಷೆಯಲ್ಲಿ, ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಮಹಾವಿದ್ಯಾಲಯದ ಅಂತಿಮ ಬಿ ಬಿ ಎ ಪದವಿಯ ವಿದ್ಯಾರ್ಥಿನಿ ಸಿಂಧೂರ 5 ನೇ ಸ್ಥಾನ ಹಾಗೂ ಅಂತಿಮ ಬಿಕಾಂ ಪದವಿಯ ಶ್ರಾವ್ಯ ಇವರು 10ನೇ ಸ್ಥಾನ ಗಳಿಸಿದ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.


ಕಾರ್ಯಕ್ರಮದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶ್ರೀ ದೇವಳದಿಂದ ಕೊಡಲ್ಪಡುವ ವಿದ್ಯಾರ್ಥಿ ವೇತನ ಹಾಗೂ ವಿವಿಧ ದತ್ತಿ ನಿಧಿಗಳನ್ನು ವಿತರಿಸಲಾಯಿತು. ಮಹಾವಿದ್ಯಾಲಯದ ಇತಿಹಾಸ ವಿಭಾಗದ ಮುಖ್ಯಸ್ಥರಾದ, ಡಾ. ಪ್ರಸಾದ ಎನ್ ಸ್ವಾಗತಿಸಿದರು, ಕನ್ನಡ ವಿಭಾಗದ ಮುಖ್ಯಸ್ಥರಾದ ಉದಯಕುಮಾರ್ ಧನ್ಯವಾದ ಸಮರ್ಪಿಸಿದರು, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಮನೋಹರ ಕಾರ್ಯಕ್ರಮ ನಿರೂಪಿಸಿದರು.