ಸೈಂಟ್ ಜೋಸೆಫ್ ಶಾಲಾ ಪ್ರಾರಂಭೊತ್ಸವ

0

ಸುಳ್ಯ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೊತ್ಸವ ಕಾರ್ಯಕ್ರಮ ಮೆ.31 ರಂದು ನಡೆಯಿತು.


ನೂತನವಾಗಿ ಸೇರ್ಪಡೆಗೊಂಡ ಮಕ್ಕಳ ವಿಶೇಷವಾಗಿ ಸ್ವಾಗತಿಸಿ ಸುಳ್ಯ ಜ್ಯೋತಿ ಸರ್ಕಲ್ ಬಳಿಯಿಂದ ಶಾಲೆಯ ವರೆಗೆ ಚೆಂಡೆ ವಾದ್ಯಗಳೊಂದಿಗೆ ಶಾಲಾ ಸಂಚಾಲಕರು ಹಾಗೂ ಶಿಕ್ಷಕರು ಮಕ್ಕಳನ್ನು ಸ್ವಾಗತಿಸಿ ಮೆರವಣಿಗೆ ಮೂಲಕ ಶಾಲೆಗೆ ಕರೆದುಕೊಂಡು ಬಂದ್ದರು.


ನಂತರ ಶಾಲಾ ಸಭಾಂಗಣದಲ್ಲಿ ಮರಳಿ ಶಾಲೆ ಆರಂಭ ಕಾರ್ಯಕ್ರಮ ನಡೆಯಿತು.
ಇದೇ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಟಾಪರ್ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.
ಶಾಲಾ ಪ್ರಾರಂಭೊತ್ಸವ ಕಾರ್ಯಕ್ರಮವನ್ನು ಶಾಲಾ ಸಂಚಾಲಕರಾದ ರೆ.ಪಾ.ವಿಕ್ಟರ್ ಡಿಸೋಜ ಉದ್ಘಾಟಿಸಿದರು.


ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಜೆ.ಕೆ ರೈ,ಗುರು ಸ್ವಾಮಿ, ಮುಖ್ಯ ಶಿಕ್ಷಕಿ ಸಿಸ್ಟರ್ ಬಿನೋಮ,ಚರ್ಚ್ ಪಾಲನ ಸಮಿತಿ ಉಪಾಧ್ಯಕ್ಷ ನವೀನ್ ಮಚಾದೋ, ಮೊದಲಾದವರು ಉಪಸ್ಥಿತರಿದ್ದರು