ಎಲಿಮಲೆಯಲ್ಲಿ ಸುಳ್ಯ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ

0

ಎಲ್ಲಾ ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ 2024-25 ನೇ ಶೈಕ್ಷಣಿಕ ವರ್ಷ ಸಹಕಾರಿ : ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಇ.

ಎಲಿಮಲೆ ಸರಕಾರಿ ಪ್ರೌಢಶಾಲೆ, ಜ್ಞಾನದೀಪ ವಿದ್ಯಾಸಂಸ್ಥೆ ಮತ್ತು ದೇವಚಳ್ಳ ಪ್ರಾಥಮಿಕ ಶಾಲೆಗಳ ಸಮಾಗಮದೊಂದಿಗೆ ನಡೆದ ಕಾರ್ಯಕ್ರಮ

“2024-25 ನೇ ಶೈಕ್ಷಣಿಕ ವರ್ಷವೂ ಎಲ್ಲಾ ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಸಹಕಾರಿಯಾಗುವುದರೊಂದಿಗೆ ಶೈಕ್ಷಣಿಕ ಬಲವರ್ಧನೆ ” ಎಂದು ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಇ. ಕರೆ ನೀಡಿದರು.

   ಅವರು ಸರಕಾರಿ ಪ್ರೌಢಶಾಲೆ ಎಲಿಮಲೆ, ಜ್ಞಾನ ದೀಪ ಸಮೂಹ ವಿದ್ಯಾಸಂಸ್ಥೆಗಳು  ಎಲಿಮಲೆ,  ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ ಇವುಗಳ ಜಂಟಿ ಆಶ್ರಯದಲ್ಲಿ ಇಂದು ಬೆಳಿಗ್ಗೆ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ 2024-25ನೇ ಶೈಕ್ಷಣಿಕ ಸಾಲಿನ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಉಚಿತ ಸಮವಸ್ತ್ರ ಮತ್ತು ಪಠ್ಯಪುಸ್ತಕ ನೀಡಿ ಮಾತನಾಡಿದರು. 

ಸಭಾ ಕಾರ್ಯಕ್ರಮದ ಮೊದಲು ಎಲಿಮಲೆಯ ಪೇಟೆಯಿಂದ ಸರಕಾರಿ ಪ್ರೌಢಶಾಲೆ ಎಲಿಮಲೆ, ಜ್ಞಾನ ದೀಪ ಸಮೂಹ ವಿದ್ಯಾಸಂಸ್ಥೆಗಳು ಎಲಿಮಲೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ ಇಲ್ಲಿನ ವಿದ್ಯಾರ್ಥಿಗಳನ್ನು ಬ್ಯಾಂಡ್ ವಾದ್ಯಗಳೊಂದಿಗೆ ಮೆರವಣಿಗೆಯಲ್ಲಿ ಕರೆತಂದು ಆರತಿ ಬೆಳಗಿ ಹೂ ನೀಡಿ ಸ್ವಾಗತಿಸಲಾಯಿತು. ಬಳಿಕ ಸಭಾ ಕಾರ್ಯಕ್ರಮ ನಡೆಯಿತು.

   ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಜಿ. ಇವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಉಚಿತ ಸಮವಸ್ತ್ರ ಮತ್ತು ಪಠ್ಯ ಪುಸ್ತಕವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಮೇಶ್ ಬಿ ಇ ರವರು ವಿದ್ಯಾರ್ಥಿಗಳಿಗೆ ನೀಡಿದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ಪ್ರೌಢಶಾಲೆ ಎಲಿಮಲೆಯ ಎಸ್ ಡಿ ಎಂ ಸಿ ಸದಸ್ಯ ಅಚ್ಚುತ ಮುಂಡೋಕಜೆ ವಹಿಸಿದ್ದರು. ಅಥಿತಿಗಳಾಗಿ ಸಮನ್ವಯಾಧಿಕಾರಿಗಳಾದ ಶ್ರೀಮತಿ ಶೀತಲ್ ಯು ಕೆ, ದೇವಚಳ್ಳ ಗ್ರಾಮ ಪಂಚಾಯತಿನ ಪಿ ಡಿ ಒ ಗುರುಪ್ರಸಾದ್, ಶಿಕ್ಷಣ ಸಂಯೋಜಕರಾದ ಶ್ರೀಮತಿ ಸಂಧ್ಯಾ, ದೈಹಿಕ ಶಿಕ್ಷಣ ಪರಿವೀಕ್ಷಕರಾದ ಆಶಾ ಕುಮಾರಿ ನಾಯಕ್, ದೇವಚಳ್ಳ ಕ್ಲಸ್ಟರ್ ಸಿ ಆರ್ ಪಿ ಗಳಾದ ಮಹೇಶ್, ದೇವಚಳ್ಳ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಜಯಾನಂದ ಪಟ್ಟೆ , ಮುಖ್ಯ ಶಿಕ್ಷಕರಾದ ಶ್ರೀಧರ ಗೌಡ ಕೆರೆಮೂಲೆ, ಜ್ಞಾನದೀಪ ಸಮೂಹ ವಿದ್ಯಾಸಂಸ್ಥೆಗಳು ಎಲಿಮಲೆ ಇದರ ಮುಖ್ಯ ಶಿಕ್ಷಕರಾದ ಗದಾಧರ ಬಾಳುಗೋಡು ಹಾಗೂ 3 ವಿದ್ಯಾಸಂಸ್ಥೆಯ ಎಸ್ ಡಿ ಎಂ ಸಿ ಸದಸ್ಯರು, ಪೋಷಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶ್ರೀಮತಿ ಶೀತಲ್ ಯು ಕೆ ಸ್ವಾಗತಿಸಿ, ಮುಖ್ಯ ಶಿಕ್ಷಕಿ ಶ್ರೀಮತಿ ಸಂಧ್ಯಾ ಕೆ ಇವರು ಧನ್ಯವಾದ ಅರ್ಪಿಸಿದರು. ಶಿಕ್ಷಕರಾದ ಮುರಳೀಧರ ಪುನುಕುಟ್ಟಿ ಕಾರ್ಯಕ್ರಮ ನಿರೂಪಿಸಿದರು.