ಜಯನಗರ: ಶಾಲಾ ಪ್ರಾರಂಭೋತ್ಸವ

0

ಆಕರ್ಷಕ ಬ್ಯಾಂಡ್ ವಾದ್ಯದೊಂದಿಗೆ ಆಕರ್ಷಕ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು

ಜಯನಗರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ನೂತನ ವರ್ಷದ ಪ್ರಾರಂಭೋತ್ಸವ ಇಂದು ನಡೆಯಿತು.
ಶಾಲಾ ವಿದ್ಯಾರ್ಥಿಗಳು ಆಕರ್ಷಕ ಬ್ಯಾಂಡ್ ವಾದ್ಯದೊಂದಿಗೆ ಮೆರವಣಿಗೆ ನಡೆಸಿ ಶಾಲಾ ಪ್ರಾರಂಭೋತ್ಸವವನ್ನು ಆಚರಿಸಿಕೊಂಡರು. ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು, ಪೋಷಕರು,ಶಿಕ್ಷಕರುಗಳು ಭಾಗವಹಿಸಿದ್ದರು.


ಬಳಿಕ ನಡೆದ ಸಭೆಯಲ್ಲಿ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಮುದ್ದಪ್ಪ ವಹಿಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.
ವೇದಿಕೆಯಲ್ಲಿ ಉಪಾಧ್ಯಕ್ಷೆ ನಳಿನಾಕ್ಷಿ, ನ ಪಂ ಸದಸ್ಯ ಬಾಲಕೃಷ್ಣ ಭಟ್ ಕೊಡಂಗೇರಿ, ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಶಿಕ್ಷಕಿ ನಳಿನಾಕ್ಷಿ ಶಾಲಾ ಕಾರ್ಯ ಚಟುವಟಿಕೆಗಳ ಬಗ್ಗೆ ವರದಿ ಮಂಡಿಸಿದರು.ಮುಖ್ಯ ಶಿಕ್ಷಕಿ ವೀಣಾ ಕೆ ಪ್ರಾಸ್ತಾವಿಕ ಮಾತನಾಡಿ ಸರ್ವರನ್ನು ಸ್ವಾಗತಿಸಿದರು. ಶಿಕ್ಷಕಿ ಮಮತಾ ವಂದಿಸಿದರು.
ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು.