ಕಲ್ಲುಗುಂಡಿ: ಸವೇರಪುರ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ

0

ದ.ಕ. ಸಂಪಾಜೆ ಗ್ರಾಮದ ಕಲ್ಲುಗುಂಡಿ ಸವೇರಪುರ ವಿದ್ಯಾಸಂಸ್ಥೆಯಲ್ಲಿ ನೂತನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಮೇ.31ರಂದು ನಡೆಸಲಾಯಿತು.

ಶಾಲೆಯನ್ನು ತಳಿರು ತೋರಣದಿಂದ ಶೃಂಗರಿಸಿ, ಎಲ್ಲಾ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು.


ಶಾಲಾ ಶಿಕ್ಷಕಿಯರು ಪ್ರಾರ್ಥಿಸಿದರು.
ಶಾಲಾ ಸಂಚಾಲಕರಾದ ಫಾ. ಪಾವ್ಲ್ ಕ್ರಾಸ್ತಾರವರು ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಮುಖ್ಯ ಶಿಕ್ಷಕಿ ಸಿಸ್ಟರ್ ಅನಿತಾ ಫೆರ್ನಾಂಡಿಸ್ ಸ್ವಾಗತಿಸಿದರು. ಸದರಿ ವರ್ಷದಲ್ಲಿ ದಾಖಲಾದ ವಿದ್ಯಾರ್ಥಿಗಳನ್ನು ವೇದಿಕೆಯಲ್ಲಿ ಪರಿಚಯಿಸಲಾಯಿತು. ವಿದ್ಯಾರ್ಥಿಗಳು ಹಾಡು, ನೃತ್ಯ ಕಾರ್ಯಕ್ರಮ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕರು, ಶಿಕ್ಷಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.