ಸುಳ್ಯ ಶ್ರೀ ಶಾರದಾ ಅನುದಾನಿತ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

0

ಶ್ರೀ ಶಾರದ ಅನುದಾನಿತ ಪ್ರೌಢಶಾಲೆಯಲ್ಲಿ ಇಲಾಖಾ ಅನುಮತಿಯೊಂದಿಗೆ ಸಹ ಶಿಕ್ಷಣವನ್ನು ಪ್ರಾರಂಭಿಸಲಾಗಿದ್ದು ,ಈ ನಿಟ್ಟಿನಲ್ಲಿ 2024 25ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ನಡೆಯಿತು .ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ದಕ್ಷಿಣ ಕನ್ನಡ ಗೌಡ ವಿದ್ಯಾಸಂಘ (ರಿ) ಸುಳ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಧನಂಜಯ ಅಡ್ಪಂಗಾಯರವರು ವಹಿಸಿದ್ದು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಡಾl ರೇವತಿ ನಂದನ್ ರವರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಗಳನ್ನು ಗಳನ್ನು ವಿತರಿಸಿದರು.

ಅಲ್ಲದೆ ಶ್ರೀ ಶಾರದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ.ಕೆ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ನಾರಾಯಣ ಜಟ್ಟಿಪಳ್ಳ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮತಿ ಪ್ರಭಾವತಿ ಇವರು ಉಪಸ್ಥಿತರಿದ್ದರು .ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮತಿ ಪ್ರಭಾವತಿ ಇವರು ಕಾರ್ಯಕ್ರಮವನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳೊಂದಿಗೆ ವಿದ್ಯಾರ್ಥಿಗಳಿಗೆ ಶಾಲಾ ನಿಯಮಗಳು, ಪಠ್ಯ -ಪಠ್ಯೇತರ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.ಕುಮಾರಿ ದೀಕ್ಷಿತ ಕೆ.ಆರ್ ತಂಡದವರು ಪ್ರಾರ್ಥಿಸಿದರು. ಕನ್ನಡ ಶಿಕ್ಷಕರಾದ ಶ್ರೀಮತಿ ಗಾಯತ್ರಿ ಸಿ.ಎನ್ ರವರು ಎಲ್ಲರಿಗೂ ಧನ್ಯವಾದಗಳನ್ನು ಸಮರ್ಪಿಸಿದರು.ಸಮಾಜ ವಿಜ್ಞಾನ ಶಿಕ್ಷಕರಾದ ಸುನೀತ.ಕೆ ಆರ್ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು, ಸಿಬ್ಬಂದಿ ವರ್ಗದವರು,ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.