ಬಡ್ಡಡ್ಕ ರಾಮಕೃಷ್ಣ ಅನುದಾನಿತ ಶಾಲೆಯ ಪ್ರಾರಂಭೋತ್ಸವ

0

ಆಲೆಟ್ಟಿ ಗ್ರಾಮದ ಬಡ್ಡಡ್ಕ ರಾಮಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಯ ಪ್ರಾರಂಭೋತ್ಸವವು ಮೇ.31 ರಂದು ನಡೆಯಿತು.
ಪ್ರಸ್ತುತ ಶೈಕ್ಷಣಿಕ ವರ್ಷದ ನೂತನ ಮಕ್ಕಳಿಗೆ ಆರತಿ ಬೆಳಗಿ ಶಾಲೆಗೆ ಸ್ವಾಗತಿಸಲಾಯಿತು.


ಈ ಸಂದರ್ಭದಲ್ಲಿ ಶಾಲಾ ಸಂಚಾಲಕ ಡಾ.ಜ್ಞಾನೇಶ್ ಎನ್.ಎ, ಆಡಳಿತ ಮಂಡಳಿ ಅಧ್ಯಕ್ಷೆ ಡಾ.ಸಾಯಿಗೀತಾಜ್ಞಾನೇಶ್ ನಿವೃತ್ತ ಮುಖ್ಯ ಶಿಕ್ಷಕ ರಾಮಕೃಷ್ಣ ಕಡಂಬಳಿತ್ತಾಯ,


ಮುಖ್ಯ ಶಿಕ್ಷಕ ರಾಧಾಕೃಷ್ಣ ಕೊಯಿಂಗಾಜೆ,ನಿವೃತ್ತ ಶಿಕ್ಷಕಿ ಶ್ರೀಮತಿ ಯಶೋಧ ಗುಂಡ್ಯ,ಶ್ರೀಮತಿ ಗೀತಾ ಸುದಾಮ ಆಲೆಟ್ಟಿ ಹಾಗೂ ಶಿಕ್ಷಕ ವೃಂದದವರು, ಶಿಕ್ಷಕೇತರ ವರ್ಗದವರು, ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು, ಪೋಷಕರು,ವಿದ್ಯಾರ್ಥಿಗಳು ಭಾಗವಹಿಸಿದರು. ಶಾಲೆಯ ಆವರಣವನ್ನು ಸಿಂಗರಿಸಲಾಗಿತ್ತು.