ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ‌ ದಿನಾಚರಣೆ

0

ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಮೇ. 31ರಂದು ಆಚರಿಸಲಾಯಿತು. ಕಾಲೇಜಿನ ಅಗದ ತಂತ್ರ, ಸ್ವಸ್ಥವೃತ್ತ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದೊಂದಿಗೆ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಉಪಾಧ್ಯಕ್ಷೆ ಶ್ರೀಮತಿ ಶೋಭಾಚಿದಾನಂದ, ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ, ಸಂಸ್ಥೆಯ ಭೋಧಕ ಹಾಗೂ ಭೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಪದವಿ ವಿದ್ಯಾರ್ಥಿಗಳು, ಹಾಗೂ ಕಲಿಕಾ ವೈದ್ಯರುಗಳು ಉಪಸ್ಥಿತರಿದ್ದರು.


ತಂಬಾಕು ಸೇವನೆಯ ದುಷ್ಪರಿಣಾಮಗಳು, ಇದರಿಂದ ಉಂಟಾಗುವ ಕಾಯಿಲೆಗಳು ಹಾಗೂ ಸೇವನೆಯ ಚಟದಿಂದ ಹೊರಬರುವ ವಿಧಾನಗಳನ್ನು ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಅಗದ ತಂತ್ರ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿಯಾದ ಡಾ. ಕೋಮಲ್ ಕಾಲೆ ಹಾಗೂ ದ್ವಿತೀಯ ವರ್ಷದ ಬಿ.ಎ.ಎಂ.ಎಸ್. ಕಲಿಕಾ ವಿದ್ಯಾರ್ಥಿ ಭವಿತ್ ಶೆಟ್ಟಿ ಪ್ರಾತ್ಯಕ್ಷಿಕೆ ನೀಡಿದರು.


ದ್ವಿತೀಯ ಬಿ.ಎ.ಎಂ.ಎಸ್. ಕಲಿಕಾ ವಿದ್ಯಾರ್ಥಿಗಳಿಂದ ಕಾಲೇಜಿನ ಆವರಣದಲ್ಲಿ ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು. ಸಂಸ್ಥೆಯ ವಿದ್ಯಾರ್ಥಿಗಳಿಗೆ ನೀಲಾ ಎಂ. ಎ. ಪ್ರತೀಜ್ಞಾವಿಧಿ ಭೋಧಿಸಿದರು. ಕು. ಚಿನ್ಮಯಿ ಪ್ರಾರ್ಥಿಸಿದರು. ಕು. ಸ್ವಾತಿ ಆರ್.ಎನ್ ಸ್ವಾಗತಿಸಿ, ಕು. ಸ್ನೇಹ ಕೆ.ಸಿ ವಂದಿಸಿದರು.
ಸಂಪತ್ ಎಸ್.ಹೆಚ್ ಹಾಗೂ ಕುಮಾರಿ ದೀಕ್ಷಿತ ಎಂ.ಎಸ್ ಕಾರ್ಯಕ್ರಮ ನಿರೂಪಿಸಿದರು.