ಪೆರುವಾಜೆ ಡಾ. ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

0

ಬೆಳ್ಳಾರೆಯ ಪೆರುವಾಜೆ ಡಾ.ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2023-2024 ನೇ ಸಾಲಿನ ಕಾಲೇಜು ವಾರ್ಷಿಕ ಕ್ರೀಡಾಕೂಟವು ಕಾಲೇಜಿನ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆಯಿತು.

ಕ್ರೀಡಾಕೂಟವನ್ನು ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಪೊಡಿಯ ಅವರು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಪೂರ್ತಿಯನ್ನು ಮೈಗೂಡಿಸಿಕೊಳ್ಳುವಂತೆ ಕರೆನೀಡಿ ಶುಭ ಹಾರೈಸಿದರು.


ಕಾಲೇಜಿನ ಪ್ರಾಂಶುಪಾಲ ಪ್ರೊ.ದಾಮೋದರ ಕಣಜಾಲು ಅವರು ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ರಾಮಚಂದ್ರ ಕೆ, ಐ.ಕ್ಯೂ.ಎ.ಸಿ. ಸಹ ಸಂಚಾಲಕ ಮಂಜುನಾಥ ಸಿ. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಕಾಂತರಾಜು ಸಿ, ಸ್ನಾತಕಕೋತ್ತರ ವಿಬಾಗದ ಕ್ರೀಡಾ ಕಾರ್ಯದರ್ಶಿ ಜ್ಞಾನೇಶ, ದ್ವಿತೀಯ ಎಂ.ಎಸ್. ಡಬ್ಲ್ಯೂ. ವಿದ್ಯಾರ್ಥಿನಿ ಪವಿತ್ರ, ದ್ವಿತೀಯ ಎಂ.ಕಾಂ., ಪದವಿ ವಿಭಾಗದ ಕ್ರೀಡಾ ಕಾರ್ಯದರ್ಶಿ ಚರಣ್, ತೃತೀಯ ಬಿ.ಎಸ್. ಡಬ್ಲ್ಯೂ. ವಿದ್ಯಾರ್ಥಿನಿ, ನೀಶ್ಮ ತೃತೀಯ ಬಿ.ಎಸ್. ಡಬ್ಲ್ಯೂ. ಬೋಧಕ ಮತ್ತು ಬೋಧಕೇತರ ವೃಂದ ಉಪಸ್ಥಿತರಿದ್ದರು.


ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.