ಜೂ.5:ಆಲೆಟ್ಟಿ ಸದಾಶಿವ ದೇವಳದಲ್ಲಿ ಪ್ರತಿಷ್ಠಾ ವಾರ್ಷಿಕ ಮಹೋತ್ಸವ

0

ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕ ಮಹೋತ್ಸವವು ಜೂ.6 ರಂದು ಕುಂಟಾರು ಕ್ಷೇತ್ರದ ಬ್ರಹ್ಮಶ್ರೀ ವೇದಮೂರ್ತಿ ರವೀಶ್ ತಂತ್ರಿಯವರ ನೇತೃತ್ವದಲ್ಲಿ ನಡೆಯಲಿರುವುದು.

ಬೆಳಗ್ಗೆ ಶ್ರೀ ದೇವರಿಗೆ ಪೂಜೆಯು ನೆರವೇರಲಿದೆ. ಬಳಿಕ ಗಣಪತಿ ಹವನವಾಗಿ ಏಕದಶರುದ್ರಾಭಿಷೇಕ ನಡೆಯಲಿದೆ.

ಮಧ್ಯಾಹ್ನ ಮಹಾಪೂಜೆಯಾಗಿ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ ರವರು ತಿಳಿಸಿದರು.