ಜೂ.7: ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ನೂತನ ರಾಜಗೋಪುರ ನಿರ್ಮಾಣಕ್ಕೆ ಶಂಕುಸ್ಥಾಪನೆ

0

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ನೂತನ ರಾಜಗೋಪುರ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮವು ವೇದಮೂರ್ತಿ ಬ್ರಹ್ಮಶ್ರೀ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜೂ.7ರಂದು ನಡೆಯಲಿದೆ.


ಶಿಕ್ಷಣತಜ್ಞ , ಸಾಹಿತಿ ಕೆ.ಇ. ರಾಧಾಕೃಷ್ಣ ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಮಾಜಿ ಶಾಸಕ ಕೆ.ಜಿ‌. ಬೋಪಯ್ಯ, ಸುಳ್ಯದ ಭಾರತ್ ಆಗ್ರೋ ಸರ್ವೀಸ್ & ಸಪ್ಲೈಸ್ ಮಾಲಕ ರೊ. ರಾಮಚಂದ್ರ ಪಿ. , ಶಿಲ್ಪ ಶಾಸ್ತ್ರಜ್ಞ ರಮೇಶ್ ಕಾರಂತ ಬೆದ್ರಡ್ಕ ಉಪಸ್ಥಿತರಿರಲಿದ್ದಾರೆ.

ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಜಿತೇಂದ್ರ ನಿಡ್ಯಮಲೆ, ದೇವತಕ್ಕ ರಾಜಗೋಪಾಲ ರಾಮಕಜೆ, ಆಡಳಿತ ಕಾರ್ಯದರ್ಶಿ ತೇಜಪ್ರಸಾದ ಅಮೆಚೂರು, ಸಹಕಾರ್ಯದರ್ಶಿ ಚಿನ್ನಪ್ಪ ಅಡ್ಕ ಸೇರಿದಂತೆ ದೇವಸ್ಥಾನದ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ.