ಸುಳ್ಯದ ಎಂ.ಜಿ.ಎಂ.‌ ವಿದ್ಯಾಸಂಸ್ಥೆಯಲ್ಲಿ ಶಾಲಾ ಆರಂಭೋತ್ಸವ

0

ಸುಳ್ಯದ ಕೊಡಿಯಾಲಬೈಲಿನಲ್ಲಿರುವ ಮಹಾತ್ಮಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆಯಲ್ಲಿ 2024-25ನೇ ಸಾಲಿನ ಶಾಲಾ ಆರಂಭೋತ್ಸವ ನಡೆಯಿತು. ಶಾಲೆಯನ್ನು ಸಿಂಗರಿಸಿ ವಾದ್ಯ ಘೋಷದೊಂದಿಗೆ ಆಕರ್ಷಕ ಮೆರವಣಿಗೆ ನಡೆಸಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಸಂಸ್ಥೆಯ ಸಂಚಾಲಕರಾದ ದೊಡ್ಡಣ್ಣ ಬರೆಮೇಲು ಹಾಗೂ ಸಂಸ್ಥೆಯ ಅಧ್ಯಕ್ಷರಾದ ಚಂದ್ರ ಕೋಲ್ಚಾರ್ ಇವರು ಉಪಸ್ಥಿತರಿದ್ದು ಶುಭ ಹಾರೈಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯಲಕ್ಷ್ಮೀಯವರು ಸ್ವಾಗತಿಸಿ, ಶಾಲಾ ಸಹ ಶಿಕ್ಷಕಿ ಶ್ರೀಮತಿ ಚಿತ್ರಲೇಖರವರು ವಂದಿಸಿದರು.