ಎಂ.ಜಿ.ಎಂ. ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಸುಳ್ಯ ಕೊಡಿಯಾಲಬೈಲಿನ ಎಂ.ಜಿ.ಎಂ. ಶಾಲಾ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಶಾಲಾ ಸಂಚಾಲಕರಾದ ದೊಡ್ಡಣ್ಣ ಬರೆಮೇಲುರವರ ಮಾರ್ಗದರ್ಶನದಲ್ಲಿ , ಫೆಡರಲ್ ಬ್ಯಾಂಕ್ ನ ಸಹಯೋಗದೊಂದಿಗೆ ಸಂಸ್ಥೆಯಲ್ಲಿ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಫೆಡರಲ್ ಬ್ಯಾಂಕ್ ನ ಮ್ಯಾನೇಜರ್ ನಿತಿನ್, ಅಸಿಸ್ಟೆಂಟ್ ಮ್ಯಾನೇಜರ್ ಸ್ಕಂದನ್ ರವರು ಆಗಮಿಸಿ ಪೇರಳೆ, ಹಲಸು ಹಾಗೂ ಮಾವಿನ ಗಿಡಗಳನ್ನು ಕೊಡುಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯ ಶಿಕ್ಷಕಿ ಹಾಗೂ ಸಹ ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.