ವಿನೋಬನಗರ: ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ಪರಿಸರ ದಿನ

0

ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಜೂ. 5ರಂದು ವಿಶ್ವ ಪರಿಸರದ ದಿನದ ಅಂಗವಾಗಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಕಿರು ಪ್ರಹಸನದೊಂದಿಗೆ ವಿದ್ಯಾರ್ಥಿಗಳಿಗೆ ಚಟುವಟಿಕೆಯ ಮೂಲಕ ಪರಿಸರ ದಿನದ ಮಹತ್ವವನ್ನು ತಿಳಿಸಿಕೊಟ್ಟರು. ಸಂಸ್ಥೆಯ ವಿಜ್ಞಾನ ಶಿಕ್ಷಕಿ ತೇಜಸ್ವಿ ಕಾಡು ಬೆಳೆಸಿ ನಾಡು ಉಳಿಸಿ, ‘ಹಸಿರೇ ಉಸಿರು’ಎಂಬಂತೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು, ಮುಖ್ಯೋಪಾಧ್ಯಾಯರು ಮತ್ತು ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.