ಕೆವಿಜಿ ಐಪಿಎಸ್ ನಲ್ಲಿ ಪರಿಸರ ದಿನಾಚರಣೆ

0

ಪರಿಸರ ಸಂರಕ್ಷಣೆಗಾಗಿ ಜಾಗೃತಿ ಕ್ರಮವನ್ನು ಕೈಗೊಳ್ಳುವ ಸಲುವಾಗಿ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಜೂ. 5 ರಂದು ಪರಿಸರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ ವಿ ಮತ್ತು ಶಾಲಾ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಉಜ್ವಲ್ ಯು..ಜೆ ಶುಭ ಹಾರೈಸಿದರು.


ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ” ನಾವೆಲ್ಲರೂ ಪ್ರಕೃತಿಯ ಭಾಗ. ಪ್ರಕೃತಿಯ ಸ್ವಚ್ಛತೆ ನಮ್ಮೆಲ್ಲರ ಆದ್ಯ ಕರ್ತವ್ಯ. ನಾವೆಲ್ಲರೂ ಪ್ರಕೃತಿಯನ್ನು ಉಳಿಸಿ ಬೆಳೆಸೋಣ ” ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಬಳಿಕ 9ನೇ ತರಗತಿಯ ಮನ್ವಿತ ಮತ್ತು ಶ್ರದ್ಧಾ ಪೈ ಪರಿಸರ ದಿನದ ಮಹತ್ವವನ್ನು ತಿಳಿಸಿಕೊಟ್ಟರು.

ಸೋನಾ ನಾರ್ಕೊಡು ಪರಿಸರ ಸಂರಕ್ಷಣೆಯ ಕುರಿತು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸ್ಕಂದದಿಯಾ ಕಲ್ಲಾಜೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಕೊನೆಗೆ ಪ್ರಾಂಶುಪಾಲರು ಶಾಲಾ ವಿದ್ಯಾರ್ಥಿ ತಂಡದ ಉಪ ನಾಯಕ, ಉಪ ನಾಯಕಿ ಹಾಗೂ ಶಿಕ್ಷಕರಿಗೆ ಗಿಡಗಳನ್ನು ಹಸ್ತಾಂತರಿಸುವ ಮೂಲಕ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಿದರು. ಬಳಿಕ ಏಳು ಮತ್ತು ಎಂಟನೇ ತರಗತಿಯ ವಿದ್ಯಾರ್ಥಿಗಳಿಂದ ಕೆವಿಜಿ ಕ್ಯಾಂಪಸ್ ನಲ್ಲಿ ಪರಿಸರ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.