ರೋಟರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ

0

ಸುಳ್ಯ ರೋಟರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪರಿಸರ ದಿನವನ್ನು ಆಚರಿಸಲಾಯಿತು.ಶಾಲಾ ಮುಖ್ಯೋಪಾಧ್ಯಾಯಿನಿ ವೀಣಾ ಶೇಡಿಕಜೆ ಪರಿಸರದ ಪ್ರಾಮುಖ್ಯತೆ ಮತ್ತು ಪರಿಸರ ರಕ್ಷಣೆಯ ಬಗ್ಗೆ ಮನೋಜ್ಞವಾಗಿ ತಿಳಿಸಿದರು.

ವಿದ್ಯಾರ್ಥಿಗಳು ಭಾಷಣ ಮತ್ತು ಸಾಮೂಹಿಕ ಪರಿಸರ ಗೀತೆಯ ಮೂಲಕ ಪರಿಸರದ ಮಹತ್ವವನ್ನು ತಿಳಿಸಿದರು.ಎಲ್ಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.