ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

0

ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರಿಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ವಿವಿಧ ಕೌಶಲ್ಯಾಭಿವೃದ್ಧಿ (ತಾಂತ್ರಿಕ ನೈಪುಣ್ಯತೆ) ತರಬೇತಿಗಾಗಿ ಆಫ್ ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ನಿಗದಿತ ಅರ್ಜಿ ನಮೂನೆಯೊಂದಿಗೆ ದಾಖಲಾತಿಗಳನ್ನು ಕೂಡಲೇ ಸಹಾಯಕ ನಿರ್ದೇಶಕರು(ಗ್ರೇಡ್-2)ರವರ ಕಛೇರಿ, ಸಮಾಜ ಕಲ್ಯಾಣ ಇಲಾಖೆ ಸುಳ್ಯ ತಾಲೂಕು ಇಲ್ಲಿಗೆ ಬಂದು ಸಲ್ಲಿಸುವುದು.

ಸಲ್ಲಿಸಬೇಕಾದ ದಾಖಲಾತಿಗಳು:
ಅಭ್ಯರ್ಥಿಯ ಆಧಾರ್ ಕಾರ್ಡ್ ಪ್ರತಿ (ಕಡ್ಡಾಯ), ಅಭ್ಯರ್ಥಿಯ ಜಾತಿ ಪ್ರಮಾಣ ಪತ್ರದ ಪ್ರತಿ, ಅಭ್ಯರ್ಥಿಯ ಪಡಿತರ ಚೀಟಿ, ಅಭ್ಯರ್ಥಿಯ ಆದಾಯ ಪ್ರಮಾಣ ಪತ್ರದ ಪ್ರತಿ, ಅಭ್ಯರ್ಥಿಯ ವಿದ್ಯಾರ್ಹತೆ ಪ್ರಮಾಣ ಪತ್ರದ ಪ್ರತಿ, ಅಭ್ಯರ್ಥಿಯ ಮೊಬೈಲ್ ಸಂಖ್ಯೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 20.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು(ಗ್ರೇಡ್-2)ರವರ ಕಛೇರಿ, ಸಮಾಜ ಕಲ್ಯಾಣ ಇಲಾಖೆ 9480843116 ಇವರನ್ನು ಸಂಪರ್ಕಿಸಬಹುದು.