ಮುರುಳ್ಯ : ವಿಶ್ವ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನದ ಅಂಗವಾಗಿ ಮಾದಕ ವಸ್ತುವಿನ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮುರುಳ್ಯ ಒಕ್ಕೂಟದ ಸದಸ್ಯರಿಗೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಒಕ್ಕೂಟದ ಅಧ್ಯಕ್ಷ ಪದ್ಮನಾಭ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿಶ್ವನಾಥ ಗೌಡ ಮಾದಕ ವಸ್ತುಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಹಿಳೆಯರ ಪಾತ್ರದ ಬಗ್ಗೆ ಮಾಹಿತಿ ಮಾರ್ಗದರ್ಶನವನ್ನು ನೀಡಿದರು. ಸಂರಕ್ಷಣಾ ಘಟಕದ ಮಾದಕ ವಸ್ತುಗಳಿಂದ ಮಹಿಳೆಯರು ಮತ್ತು ಮಕ್ಕಳ ಮೇಲ ಆಗುವ ದುಷ್ಪರಿಣಾಮಗಳ ಬಗ್ಗೆ ಮತ್ತು ಮಹಿಳೆಯರ ಪಾತ್ರದ ಬಗ್ಗೆ ಮಕ್ಕಳಿಗೆ ಆಗುವ ತೊಂದರೆಗಳ ಬಗ್ಗೆ ತಿಳಿಸಿದರು ಅದೇ ರೀತಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಲೋಕನಾಥ ಅಮೇಚೂರು ಅವರು ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಮುಖೇಣ ಬೇರೆ ಬೇರೆ ದುಶ್ಚಟಗಳಿಗೆ ಹಮ್ಮಿಕೊಳ್ಳುವ ಕಾರ್ಯಕ್ರಮಗಳ ಬಗ್ಗೆ ಗಾಂಧೀಜಿಯ ಕನಸನ್ನು ನನಸು ಮಾಡುವ ಬಗ್ಗೆ ಮಾಹಿತಿಯನ್ನು ನೀಡಿದರು.

ತಾಲೂಕು ಯೋಜನಾಧಿಕಾರಿಯವರು ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಡೆದ ಬಂದ ಹಾದಿ ಹಾಗೂ ಯೋಜನೆಯ ನೀಡುತ್ತಿರುವ ಸೌಲಭ್ಯಗಳ ಬಗ್ಗೆ ಸದಸ್ಯರಿಗೆ ಸಿಗುವ ಸಂಪೂರ್ಣ ಸುರಕ್ಷಾ ಕಾರ್ಯಕ್ರಮದ ಬಗ್ಗೆ ಯೋಜನೆಯ ಮೇಲೆ ಇರುವಂತಹ ಅಪಪ್ರಚಾರದ ಬಗ್ಗೆ ಮಾಹಿತಿಯನ್ನು ನೀಡಿದರು ಅಧ್ಯಕ್ಷೀಯ ನೆಲೆಯಲ್ಲಿ ಒಕ್ಕೂಟದ ಅಧ್ಯಕ್ಷರು ಪದ್ಮನಾಭ ರವರು ಮಾತನಾಡಿದರು ವಲಯದ ಮೇಲ್ವಿಚಾರಕಿ ಶ್ರೀಮತಿ ಹೇಮಲತಾ ಕಾರ್ಯಕ್ರಮ ನಿರೂಪಿಸಿದರು. ಸಂಘದ ಸದಸ್ಯ ಬೇಬಿ ಸ್ವಾಗತಿಸಿದರು. ಅಲೆಕ್ಕಾಡಿ ಒಕ್ಕೂಟ ಅಧ್ಯಕ್ಷರಾದ ಸೂರಪ್ಪ ಗೌಡ ವಂದಿಸಿದರು.