ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾರಂಭೋತ್ಸವ

0

ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾರಂಭೋತ್ಸವ ಕಾರ್ಯಕ್ರಮ ಜೂನ್ 12ರಂದು ನಡೆಯಿತು. ವಿದ್ಯಾಸಂಸ್ಥೆಯ ಸಂಚಾಲಕರಾದ ರೊ. ಪಿಪಿ ಪಿಹೆಚ್ಎಫ್ ಗಿರಿಜಾ ಶಂಕರ್ ತುದಿಯಡ್ಕ ರವರು ಮಕ್ಕಳನ್ನು ಹುರಿದುಂಬಿಸಿ ಶುಭಹಾರೈಸಿದರು. ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಶೋಭಾ ಬೊಮ್ಮೆಟ್ಟಿ ಅವರು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿಗಳಾದ ಕುಮಾರಿ ಸಂಜನಾ ಮತ್ತು ಶ್ರೇಯಾ ಸರಸ್ವತಿಯವರು ಪ್ರಾರ್ಥನಾ ಗೀತೆಯನ್ನು ಹಾಡಿದರು. ವಿದ್ಯಾಸಂಸ್ಥೆಯ ಅಧ್ಯಕ್ಷರಾದ ರೊ. ಪಿಹೆಚ್ಎಫ್ ಆನಂದ ಖಂಡಿಗರವರು ದೀಪ ಬೆಳಗಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ರೊ. ಪಿಪಿ ಪಿಎಚ್ಎಫ್ ದಯಾನಂದ ಆಳ್ವರವರು ಮಕ್ಕಳನ್ನು ಉದ್ದೇಶಿಸಿ ಹಿತ ನುಡಿಗಳನ್ನಾಡಿದರು.
ಕು. ಹಿತ ಶೆಟ್ಟಿಯವರು ಧನ್ಯವಾದ ಸಮರ್ಪಣೆ ಮಾಡಿದರು. ಕು. ಯಜ್ಞ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದರು.