ಪೆರುವಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

0

ಪೆರುವಾಜೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ಜೂ.18 ರಂದು ಪಂಚಾಯತ್ ಅಧ್ಯಕ್ಷರಾದ ಜಗನ್ನಾಥ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಗ್ರಾಮ ಪಂಚಾಯತಿಗಳಲ್ಲಿ ಆಗುತ್ತಿದ್ದ ವಿನ್ಯಾಸ ನಕ್ಷೆ ಅನುಮೋದನೆ ಇದೀಗ ನಗರಾಭಿವೃದ್ಧಿ ಪ್ರಾಧಿಕಾರ ಮಂಗಳೂರು ಇಲ್ಲಿ ಆಗುತ್ತಿರುವುದರಿಂದ ಜನತೆಗೆ ಆಗುವ ತೊಂದರೆ ತಪ್ಪಿಸಲು ಈ ವ್ಯವಸ್ಥೆ ಮೊದಲಿನಂತೆ ಮಾಡಲು ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕಾ ಖರ್ಗೆ, ವಿಧಾನ ಸಭೆ ಅಧ್ಯಕ್ಷರಿಗೆ ಹಾಗೂ ಜಿಲ್ಲೆಯ 7 ಶಾಸಕರಿಗೆ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರಿಗೆ ಇದರ ಬಗ್ಗೆ ಕ್ರಮ ಕೈಗೊಳ್ಳಲು ಮನವಿ ಮಾಡಲು ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಈ ಕ್ರಮವನ್ನು ಎಲ್ಲಾ ಗ್ರಾಮ ಪಂಚಾಯತಿ ಮಾಡುವಂತೆ ವಿನಂತಿಸಿದ್ದಾರೆ. ಪೆರುವಾಜೆ ಗ್ರಾಮ ಪಂಚಾಯತಿ ಕುಡಿಯುವ ನೀರಿನ ವ್ಯವಸ್ಥೆಗೆ ತಾತ್ಕಾಲಿಕ ನೆಲೆಯಲ್ಲಿ ಸಿಬ್ಬಂದಿ ನೇಮಕಗೊಳಿಸುವ ತೀರ್ಮಾನ ಕೈಗೊಳ್ಳಲಾಯಿತು.


ಇನ್ನಿತರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಈ ಸಭೆಯಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ಶ್ರೀಮತಿ ಶಹನಾಜ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ಸರ್ಕಾರದ ಸುತ್ತೋಲೆ ಮತ್ತು ಪಂಚಾಯಿತಿಗೆ ಬಂದ ಮನವಿ ಗಳನ್ನು ಸಭೆಯಲ್ಲಿ ಮಂಡಿಸಿದರು.


ಪಂಚಾಯತ್ ಸದಸ್ಯರುಗಳಾದ ಸಚಿನ್ ರಾಜ್ ಶೆಟ್ಟಿ, ಮಾಧವ ಮುಂಡಾಜೆ, ಪದ್ಮನಾಭ ಶೆಟ್ಟಿ, ಶ್ರೀಮತಿ ರೇವತಿ, ಶ್ರೀಮತಿ ಚಂದ್ರಾವತಿ, ಶ್ರೀಮತಿ ಗುಲಾಬಿ ಉಪಸ್ಥಿತರಿದ್ದರು. ಪಂಚಾಯತ್ ಸಿಬ್ಬಂದಿ ಜಯಲಕ್ಷ್ಮಿ ಪ್ರಾರ್ಥನೆ ಗೈದರು, ಅಕ್ಷತಾ ವಂದಿಸಿದರು.