ಸ್ನೇಹ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

0

ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಜೂ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಂಸ್ಥೆಯ ಅಧ್ಯಕ್ಷ ಡಾ ಚಂದ್ರಶೇಖರ ದಾಮ್ಲೆಯವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷರು “ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21, 2015 ರಲ್ಲಿ ವಿಶ್ವಸಂಸ್ಥೆ ಅಂಗೀಕರಿಸಿತು.

ಅಂದಿನಿಂದ ಯೋಗಕ್ಕೆ ವಿಶ್ವದಾದ್ಯಂತ ಗೌರವ ಸಂದಿದೆ. ಇಂದು ನಾವು ಹತ್ತನೇ ವರ್ಷದ ಯೋಗ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ . ಯೋಗ ಎಂಬುದು ಮನಸ್ಸು ಮತ್ತು ದೇಹವನ್ನು ಒಂದುಗೂಡಿಸುತ್ತದೆ. ಮುಂಜಾನೆ ಎದ್ದು ನಿತ್ಯ ಅತಿಥಿಯಾದ ಸೂರ್ಯನನ್ನು ಸ್ವಾಗತಿಸುತ್ತ ಸೂರ್ಯ ನಮಸ್ಕಾರ ಮಾಡುವುದರಿಂದ ದೇಹಕ್ಕೂ ಮನಸ್ಸಿಗೂ ಚೈತನ್ಯ ದೊರಕುತ್ತದೆ ಎಂದರು.

ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಾಮೂಹಿಕ ಸೂರ್ಯ ನಮಸ್ಕಾರ ಮಾಡುವ ಮೂಲಕ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.