ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮದ್ಯವರ್ಜನ ಶಿಬಿರ ಉದ್ಘಾಟನೆ

0

ಮದ್ಯಮುಕ್ತ ಸಮಾಜದಿಂದ ದೇಶ ಕಟ್ಟುವ ಕಾರ್ಯ : ಅಣ್ಣಾ ವಿನಯಚಂದ್ರ

“ಮದ್ಯವ್ಯಸನದಿಂದ ಇಡೀ ಸಮಾಜಕ್ಕೆ ತೊಂದರೆಯಾಗುತ್ತದೆ.ಕುಡಿತ ಇಡೀ ಮನುಷ್ಯನ ವ್ಯಕ್ತಿತ್ವವನ್ನು ಮಸುಕು ಮಾಡುವುದರೊಂದಿಗೆ ಇಡೀ ಕುಟುಂಬವನ್ನು ನಾಶ ಮಾಡುತ್ತದೆ.”
ಇಲ್ಲಿ ನಡೆಯುವ ಮದ್ಯವರ್ಜನ ಶಿಬಿರದಿಂದ ಜನರು ಮದ್ಯ ತ್ಯಜಿಸಿ ನೂರಾರು ಕುಟುಂಬಗಳು ಹೊಸ ಬಾಳು ನಡೆಸಲಿ,ಜೀವನ ಸುಖಮಯವಾಗಿರಲಿ, ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಲಿ ಶಿಬಿರದಿಂದ ದೇಶ ಕಟ್ಟುವ ,ಸಮಾಜ ಕಟ್ಟುವ ಕೆಲಸವಾಗಲಿ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರರವರು ಹೇಳಿದರು.
ಅವರು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಜು.02 ರಂದು ನಡೆದ 1812 ನೇ ಮದ್ಯವರ್ಜನ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.


ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ಲೋಕನಾಥ ಅಮೆಚೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು.


ವೇದಿಕೆಯಲ್ಲಿ ದ.ಕ.ಜನಜಾಗೃತಿ ವೇದಿಕೆಯ ನಿಕಟಪೂರ್ವ ಜಿಲ್ಲಾಧ್ಯಕ್ಷ ಎನ್.ಎ.ರಾಮಚಂದ್ರ, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷೆ ಶ್ರೀಮತಿ ರಾಜೀವಿ ಆರ್.ರೈ, ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ತಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ಮದ್ಯವರ್ಜನ ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು, ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಎಸ್.ಎನ್.ಮನ್ಮಥ, ಗೌರಿಪುರಂ ರಾಜರಾಜೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ನಮಿತಾ ಎಲ್ ರೈ, ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶ್ರೀರಾಮ್ ಪಾಟಾಜೆ, ಬೆಳ್ಳಾರೆ ವಲಯ ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಆನಂದ ಗೌಡ ಪೆರಿಯಾಣ, ಬೆಳ್ಳಾರೆ ವಲಯ ಪ್ರಗತಿ ಬಂಧು ಸ್ವ ಸಹಾಯ ಒಕ್ಕೂಟದ ವಲಯಾಧ್ಯಕ್ಷೆ ಶ್ರೀಮತಿ ವೇದ ಹೆಚ್.ಶೆಟ್ಟಿ, ಉಪಾಧ್ಯಕ್ಷೆ ನಂದಿನಿ ಜನಾರ್ಧನ್,ಜನಜಾಗೃತಿ ವೇದಿಕೆ ನಿಕಟಪೂರ್ವಾಧ್ಯಕ್ಷ ಎನ್.ವಿಶ್ವನಾಥ ರೈ, ಸುರೇಶ್ ಕಣೆಮರಡ್ಕ ಉಪಸ್ಥಿತರಿದ್ದರು.


ಸೇವಾ ಪ್ರತಿನಿಧಿ ಪ್ರಾರ್ಥಿಸಿ, ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಯೋಜನಾಧಿಕಾರಿ ಮಾಧವ ಗೌಡ ಸ್ವಾಗತಿಸಿ, ಶಿಬಿರಾಧಿಕಾರಿ ನಂದ ಕುಮಾರ್ ಪ್ರಾಸ್ತಾವಿಕ ಮಾತನಾಡಿದರು.ಬೆಳ್ಳಾರೆ ವಲಯದ ಮೇಲ್ವಿಚಾರಕಿ ಶ್ರೀಮತಿ ವಿಶಾಲ ಕೆ.
ಕಾರ್ಯಕ್ರಮ ನಿರೂಪಿಸಿ,ಕಳಂಜ ಸೇವಾ ಪ್ರತಿನಿಧಿ ಹರ್ಷಿತಾ ವಂದಿಸಿದರು.