ಅರಂತೋಡು : ಅರಮನೆಗಯ ಸೇತುವೆಯ ಶಾಶ್ವತ ಪರಿಹಾರಕ್ಕೆ ಮನವಿ

0


ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಮನೆಗಯ ತೂಗುಸೇತುವೆಯ ಸಂಚಾರ ನಿರ್ಬಂಧಿಸಿರುವ ಕಾರಣ ಅಲ್ಲಿಯ ನಿವಾಸಿಗಳಿಗೆ ಶಾಶ್ವತ ಪರ್ಯಾಯ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯರಿಗೆ ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ಮನವಿ ಸಲ್ಲಿಸಿದರು.


ಈ ಸಂದರ್ಭದಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ಶ್ರೀಮತಿ ಭವಾನಿ ಚಿಟ್ಟನ್ನೂರು, ಪಂಚಾಯತ್ ಸದಸ್ಯ ವೆಂಕಟ್ರಮಣ ಪೆತ್ತಾಜೆ, ಮತ್ತು ಬಿ.ಜೆ.ಪಿ. ಪ್ರಮುಖರು, ಅರಂತೋಡು ಸಹಕಾರಿ ಸಂಘದ ಅಧ್ಯಕ್ಷ ಸಂತೋಷ ಕುತ್ತಮೊಟ್ಟೆ ಉಪಸ್ಥಿತರಿದ್ದರು.