














ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಜು.೧೦ರಂದು ಅಂಬಟೆಡ್ಕದ ಸುಳ್ಯ ಕನ್ನಡ ಭವನದಲ್ಲಿ ನಡೆಯಲಿದೆ.ಶಾಸಕಿ ಭಾಗೀರಥಿ ಮುರುಳ್ಯ ಪತ್ರಿಕಾ ದಿನಾಚರಣೆ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ದಯಾನಂದ ಕಲ್ನಾರ್ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ಪತ್ರಕರ್ತ ಜೆ.ಕೆ.ರೈಯವರನ್ನು ಸಂಸದ ಕ್ಯಾ.ಬ್ರಿಜೇಶ್ ಚೌಟ ಸನ್ಮಾನ ನೆರವೇರಿಸುವರು. ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಪ್ರಧಾನ ಉಪನ್ಯಾಸ ನೀಡಲಿದ್ದಾರೆ. ಪತ್ರಕರ್ತ ಜೆ.ಕೆ. ರೈಯವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.









