ಮಂಗಳೂರು – ಸುಬ್ರಹ್ಮಣ್ಯ ಮಧ್ಯೆ ಬೆಳಿಗ್ಗೆ ಮತ್ತು ಸಂಜೆ ಪ್ಯಾಸೆಂಜರ್ ರೈಲು ಓಡಿಸುವಂತೆ ಸಂಸದರಿಗೆ ಮನವಿ

0

ಮಂಗಳೂರು ಸುಬ್ರಹ್ಮಣ್ಯ ಮಧ್ಯೆ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಸಂಜೆ ಮತ್ತು ಬೆಳಗ್ಗೆ ಪ್ಯಾಸೆಂಜರ್ ರೈಲು ಸಂಚರಿಸಲು ಕ್ರಮ ಕೈಗೊಳ್ಳುವ ಬಗ್ಗೆ , ಮತ್ತು ಎಡಮಂಗಲದಲ್ಲಿ ಎಲ್.ಸಿ ನಂ 70 ದೇವಸ್ಥಾನದ ಹತ್ತಿರ ರೈಲ್ವೆ ಮೇಲ್ ಸೇತುವೆ ನಿರ್ಮಾಣ ಮಾಡಬೇಕು ಮತ್ತು ಎಲ್ಲಾ ಎಕ್ಸ್ಪ್ರೆಸ್ ರೈಲುಗಳು ಎಡಮಂಗಲದಲ್ಲಿ ನಿಲುಗಡೆ ಆಗಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟರಿಗೆ ಮನವಿ ನೀಡಲಾಯಿತು.

ಎಡಮಂಗಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಮಣ್ಣ ಜಾಲ್ತಾರು, ನಿಕಟಪೂರ್ವ ಬಿಜೆಪಿ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷರಾದ ಎ.ವಿ ತೀರ್ಥರಾಮ, ಸುಳ್ಯ ಮಂಡಲ ಅಧ್ಯಕ್ಷರಾದ ವೆಂಕಟ ವಳಲಂಬೆ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರಾಕೇಶ್ ಕೆಡಂಜಿ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ್ ಕಂದಡ್ಕ, ಸವಣೂರು ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಲೆಕ್ಕೆಸಿರಿ ಮಜಲು, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಗೀತಾ ಬಲ್ಕಾಡಿ, ಶ್ರೀಮತಿ ವನಿತಾ ಕಾಯಿತ್ತಿಮಾರ್, ಶ್ರೀಮತಿ ಸುಮಾ ನೂಚಿಲ ಇವರ ಸಮ್ಮುಖದಲ್ಲಿ ಮಾನ್ಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾನ್ಯ ಸಂಸದರಿಂದ ಸಕಾರಾತ್ಮಕ ಸ್ಪಂದನೆ ದೊರೆತಿದ್ದು, ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ರೈಲ್ವೆ ಸಚಿವರ ಜೊತೆ ಚರ್ಚಿಸಿ ಬೇಡಿಕೆಯನ್ನು ಶೀಘ್ರದಲ್ಲಿ ನೆರವೇರಿಸುವ ಬಗ್ಗೆ ಭರವಸೆಯನ್ನು ನೀಡಿರುತ್ತಾರೆ ಎಂದು ಎಡಮಂಗಲ ಗ್ರಾ.ಪಂ. ಅಧ್ಯಕ್ಷ ರಾಮಣ್ಣ ಜಾಲ್ತಾರು ಪತ್ರಿಕೆಗೆ ತಿಳಿಸಿದ್ದಾರೆ.