ರಾಷ್ಟ್ರೀಯ ಹೆದ್ದಾರಿಯ ಮದೆನಾಡು ಬಳಿ ರಸ್ತೆಯಲ್ಲಿ ಕಾಣಿಸಿಕೊಂಡ ಬಿರುಕು

0

ರಸ್ತೆ ಪಕ್ಕದ ಗುಡ್ಡ ಕುಸಿಯುವ ಆತಂಕ – ವಾಹನ ಸವಾರರು ಎಚ್ಚರ ವಹಿಸುವಂತೆ ಸೂಚನೆ

ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಡಿಕೇರಿಯ ಮದೆನಾಡಿನಲ್ಲಿ ಮುಖ್ಯರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ರಸ್ತೆ ಬದಿಯ ಗುಡ್ಡ ಕುಸಿಯುವ ಭೀತಿ ಎದುರಾಗಿದೆ.

ಕಳೆದ ಎರಡು ಮೂರು ದಿನಗಳಿಂದ ಕೊಡಗು ಭಾಗದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಮದೆನಾಡಿನ ಎರಡನೇ ಮೊಣ್ಣಂಗೇರಿ ಬಳಿ ಹೆದ್ದಾರಿಯ ಒಂದು ಬದಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ವಾಹನ ಸವಾರರು ಎಚ್ಚರ ವಹಿಸುವಂತೆ ಸೂಚಿಸಲಾಗಿರುವುದಾಗಿ ತಿಳಿದುಬಂದಿದೆ.