ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯಲ್ಲಿ ಉಚಿತ ಕಂಪ್ಯೂಟರ್ ತರಬೇತಿಗೆ ಅರ್ಜಿ ಆಹ್ವಾನ

0

ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ಸದ್ಯ PU ಮತ್ತು Degree ಓದುತ್ತಿರುವ ವಿದ್ಯಾರ್ಥಿಗಳಿಗಾಗಿಯೇ ಉಚಿತ ಕಂಪ್ಯೂಟರ್ ತರಬೇತಿ ನೀಡಲಿದೆ.
ತರಗತಿಯು ಪ್ರತೀ ಭಾನುವಾರದಂದು ಇರಲಿದ್ದು , ವಿದ್ಯಾಮಾತಾ ಇದರ ಸುಳ್ಯ ಶಾಖೆಯಲ್ಲಿ ಉಚಿತ ಕಂಪ್ಯೂಟರ್ ತರಬೇತಿಯನ್ನು ನುರಿತ ಶಿಕ್ಷಕರ ಮೂಲಕ ನೀಡಲಿದ್ದು, ಈ ಸಂಬಂಧ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ತರಬೇತಿ ಪಡೆಯುವ ವಿದ್ಯಾರ್ಥಿಗಳಿಗೆ ತರಬೇತಿಯ ಪ್ರಮಾಣ ಪತ್ರವನ್ನು ಕೂಡ ಸಂಸ್ಥೆ ನೀಡಲಿದೆ. ತರಬೇತಿ ಬಯಸೋ ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್ ಮತ್ತು 2 ಪಾಸ್ ಪೋರ್ಟ್ ಅಳತೆಯ ಫೋಟೋದೊಂದಿಗೆ ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖಾ ಕಚೇರಿಯನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದ್ದು ,
ನೋಂದಾವಣೆಯೂ ಸೋಮವಾರದಿಂದ ಭಾನುವಾರ ಬೆಳಿಗ್ಗೆ 9 ರಿಂದ ಸಾಯಂಕಾಲ 3 ರ ವರೆಗೆ ಮಾತ್ರ.ಅಧಿಕ ಮಾಹಿತಿಗಾಗಿ
ದೂರವಾಣಿ ಸಂಖ್ಯೆ 9448527606 , 9148935808 ಸಂಪರ್ಕಿಸಬಹುದು.