ಪೆರುವಾಜೆ ಗ್ರಾಮ ಪಂಚಾಯತ್ ಗ್ರಾಮ ಸಭೆ

0

ಮೂಲಭೂತ ಸೌಕರ್ಯ,ಮನೆ ನಂಬರ್ ಬದಲಾವಣೆ ಬಗ್ಗೆ ಸುದೀರ್ಘ ಚರ್ಚೆ

ಪೆರುವಾಜೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರುರವರ ಅಧ್ಯಕ್ಷತೆಯಲ್ಲಿ ಜು.19 ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.


ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಶೈಲಜಾರವರು ನೋಡೆಲ್ ಅಧಿಕಾರಿಯಾಗಿದ್ದರು.
ಪಂಚಾಯತ್ ಪಿಡಿಒ ಜಯಪ್ರಕಾಶ್ ಅಲೆಕ್ಕಾಡಿ ಸ್ವಾಗತಿಸಿ,ವರದಿ ಮಂಡಿಸಿದರು.
ವೇದಿಕೆಯಲ್ಲಿ ಉಪಾಧ್ಯಕ್ಷೆ ಶಹಿನಾಜ್ ಮತ್ತು ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.


ಇಲಾಖಾಧಿಕಾರಿಗಳು ಮಾಹಿತಿ ನೀಡಿದರು.
ಕುಡಿಯುವ ನೀರು,ರಸ್ತೆ, ವಸತಿ, ವಾರ್ಡ್ ನಂಬ್ರ ಬದಲಾವಣೆ, ಇನ್ನಿತರ ವಿಷಯಗಳ ಬಗ್ಗೆ ಸುದೀರ್ಘ ಚರ್ಚೆಗಳು ನಡೆಯಿತು.